ಮಡಿಕೇರಿ, ಮಾ. ೫: ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ೨೦೨೦-೨೧ನೇ ಸಾಲಿನ ಕಾಂತೂರು ಮೂರ್ನಾಡು ಮತ್ತು ಐಕೊಳ ಗ್ರಾಮದ ಜಲಜೀವನ್ ಮಿಷನ್ ಯೋಜನೆಯ ವಿಶೇಷ ಗ್ರಾಮ ಸಭೆ ತಾ. ೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಗ್ರಾಮ ಪಂಚಾಯಿತಿ ಕಚೇರಿಯ ಸಭಾಂಗಣ ದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಸಿ.ಸುಜಾತ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.