ಕುಶಾಲನಗರ, ಮಾ. ೬: ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ ೧೧೬ನೇ ಮಹಾ ಆರತಿ ಬೆಳಗಲಾಯಿತು. ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ನಡೆದ ಕಾರ್ಯಕ್ರಮದಲ್ಲಿ ಅರ್ಚಕ ಕೃಷ್ಣಮೂರ್ತಿ ಭಟ್ ಪೂಜಾ ವಿಧಿ ನೆರವೇರಿಸಿದರು. ಅಷ್ಟೋತ್ತರ, ಕುಂಕುಮಾರ್ಚನೆ, ಕಾವೇರಿ ಸ್ತೋತ್ರ ಪಠಣದ ನಂತರ ಕಾವೇರಿಗೆ ಸಾಮೂಹಿಕವಾಗಿ ಮಹಾ ಆರತಿ ಬೆಳಗಲಾಯಿತು. ನದಿ ಸ್ವಚ್ಛತಾ ಆಂದೋಲನ ಸಮಿತಿಯ ಎಂ.ಎನ್. ಚಂದ್ರಮೋಹನ್, ಕೆ.ಆರ್. ಶಿವಾನಂದ್, ಅಕ್ಷಯ್ ಇದ್ದರು.

ಕುಶಾಲನಗರ ಗಡಿ ಕೊಪ್ಪ ಕಾವೇರಿ ಪ್ರತಿಮೆಗೆ ೯೬ನೇ ಆರತಿ ಮತ್ತು ಅಭಿಷೇಕ ಕಾರ್ಯಕ್ರಮ ನಡೆಯಿತು. ಬಾರವಿ ಕನ್ನಡ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಯಮಿ ವಿಶ್ವನಾಥನ್, ಬಾರವಿ ಕನ್ನಡ ಸಂಘದ ಬಬೀಂದ್ರಪ್ರಸಾದ್, ರವೀಂದ್ರಪ್ರಸಾದ್, ವಿಜಯೇಂದ್ರ ಪ್ರಸಾದ್ ಮತ್ತಿತರರು ಇದ್ದರು.