ನಾಪೋಕ್ಲು, ಮಾ. ೬: ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ಸಮಸ್ಯೆಗಳು ಮತ್ತು ಅವರು ಅನುಸರಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಪಾಲಾಕ್ಷ, ಶ್ರೀನಾಥ್, ದೇಚಮ್ಮ, ಚರಣ್, ವೇದಾವತಿ, ಉಮಾಮಹೇಶ್ವರಿ, ಗೀತಾ ಜನನಾಂಗ ಮಾರ್ಗದ ಸೊಂಕು, ವೈಯಕ್ತಿಕ ಸ್ವಚ್ಛತೆ, ಮುಟ್ಟಿನ ತೊಂದರೆ, ಪರಿಸರ ಸ್ವಚ್ಛತೆ, ಪೌಷ್ಟಿಕಾಂಶಯುಕ್ತ ಆಹಾರಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.
ಕಾಲೇಜು ಪ್ರಾಂಶುಪಾಲೆ ಅವನಿಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಜರಿದ್ದರು.