ವೀರಾಜಪೇಟೆ, ಮಾ. ೬: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳು ಮತ್ತು ಕೃಷಿ ನೀತಿಯನ್ನು ಖಂಡಿಸಿ ರಾಜ್ಯ ನಾಯಕರ ಸಮ್ಮಖದಲ್ಲಿ ಮಾರ್ಚ್ ಕೊನೆಯ ವಾರದಲ್ಲಿ ಜಿಲ್ಲೆಯಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ತಿಳಿಸಿದ್ದಾರೆ.
ಕೊಡಗು ಕಿಸಾನ್ ಘಟಕದಿಂದ ಆಯೋಜಿಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ. ಪ್ರಧಾನಿ ಪ್ರಕೃತಿ ವಿಕೋಪ ಆದ ಕೇರಳ ರಾಜ್ಯಕ್ಕೆ ಭೇಟಿ ನೀಡುತ್ತಾರೆ. ಕೇರಳ ರಾಜ್ಯದಲ್ಲಿ ಕಾಫಿಗೆ ಬೆಂಬಲ ಬೆಲೆ ಘೋಷಿಸಿದ್ದಾರೆ. ನಮ್ಮ ಸರ್ಕಾರ ನಿಷ್ಕಿçಯ ಸ್ಥಿತಿಯಲ್ಲಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರು ಕೂಡ ವನ್ಯಪ್ರಾಣಿ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಿಸಾನ್ ಘಟಕದ ರಾಜ್ಯ ಕಾರ್ಯದರ್ಶಿ ಗೋಪಾಲಕೃಷ್ಣ ಮಾತನಾಡಿ, ದಿನದಿಂದ ದಿನಕ್ಕೆ ರೈತರ ಸವiಸ್ಯೆಗಳು ಹೆಚ್ಚಾಗುತ್ತಿವೆ. ರೈತರು ಬೆಳೆದ ಬೆಳೆಗಳು ಕಾಡು ಪ್ರಾಣಿಗಳ ಪಾಲಾಗುತ್ತಿದೆ. ಅತಿವೃಷ್ಟಿಯಿಂದ ಬೆಳೆಗಳನ್ನು ಕಳೆದುಕೊಂಡರು ಸರ್ಕಾರ ಬೆಂಬಲ ಬೆಲೆ ಘೋಷಿಸುತ್ತಿಲ್ಲ. ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ದುಪ್ಪಟು ಮಾಡಬೇಕು, ಯೋಜನೆಯಿಂದ ಹೊರಗುಳಿದ ರೈತರನ್ನು ಸೇರ್ಪಡೆಗೊಳಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಾಣಿಜ್ಯ ಬೆಳೆಗಳಾದ ಕಾಫಿ ಹಾಗೂ ಬಾಳೆ ಇತ್ಯಾದಿಗಳನ್ನು ಸೇರ್ಪಡೆ ಗೊಳಿಸಬೇಕು. ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನ ಹಂಚಬೇಕು. ೯೪ಸಿ ಮತ್ತು ೯೪ಸಿ.ಸಿಯನ್ನು ಜಾರಿಗೆ ತರಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸ ಲಾಗುವುದು ಎಂದು ತಿಳಿಸಿದರು.
ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ವಕ್ತಾರ ಆರ್.ಕೆ ಸಲಾಂ ಮಾತನಾಡಿ ದರು. ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷ ಎಂ.ಎಸ್ ಪೂವಯ್ಯ, ಜಿಲ್ಲಾ ಸೇವಾದಳ ಅಧ್ಯಕ್ಷ ಚಿಲ್ಲವಂಡ ಕಾವೇರಪ್ಪ, ನಗರ ಅಧ್ಯಕ್ಷ ಜಿ.ಜಿ ಮೋಹನ್, ವೀರಾಜಪೇಟೆ ಬ್ಲಾಕ್ ಮಹಿಳಾ ಅಧ್ಯಕ್ಷೆ ಪೊನ್ನಕ್ಕಿ, ದಿವ್ಯಾ, ಜಿಲ್ಲಾ ಕಾರ್ಯದರ್ಶಿ ಗಾಯತ್ರಿ ನರಸಿಂಹ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಷಿಕ್ ಮತ್ತಿತರರು ಉಪಸ್ಥಿತರಿದ್ದರು.