ನಾಪೋಕ್ಲು, ಮಾ. ೬: ಗ್ರಂಥಾಲಯಗಳು ಜ್ಞಾನ ವೃದ್ಧಿಯ ಕೇಂದ್ರಗಳಿದ್ದAತೆ. ಪುಸ್ತಕ ಖರೀದಿಸಲು ಸಾಧ್ಯವಿಲ್ಲದ ಜನ ಗ್ರಂಥಾಲಯಗಳ ಮೂಲಕ ತಮ್ಮ ಜ್ಞಾನ ವೃದ್ಧಿಸಿಕೊಳ್ಳಬಹುದು ಎಂದು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ನಾಪೋಕ್ಲು ಗ್ರಾಮ ಪಂಚಾಯಿತಿಯ ನೂತನ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಪಂಚಾಯಿತಿ ಕಚೇರಿಗಳ ಉನ್ನತೀಕರಣ, ಡಿಜಿಟಲ್ ಗ್ರಂಥಾಲಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಡಿಜಿಟಲ್ ಗ್ರಂಥಾಲಯದ ಮೂಲಕ ಐ.ಎ.ಎಸ್, ಐ.ಪಿ.ಎಸ್, ಕೆ.ಎ.ಎಸ್ ಪರೀಕ್ಷೆಗಳಿಗೆ ಅಗತ್ಯವಾದ ಪುಸ್ತಕಗಳನ್ನು ಓದಲು ಸಾಧ್ಯ. ಇದರ ಪ್ರಯೋಜನ ಪಡೆದುಕೊಂಡು ಗ್ರಾಮೀಣ ಪ್ರದೇಶದ ಮಕ್ಕಳು ಉನ್ನತ ಶಿಕ್ಷಣ ಪಡೆಯುವಂತಾ ಗಬೇಕು ಎಂದರು.

ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಮಾತನಾಡಿ, ಕಸ ವಿಲೇವಾರಿ ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಂದು ದೊಡ್ಡ ಸವಾಲಾಗಿದೆ. ವ್ಯಾಪಾರಸ್ಥರ ಮನವೊಲಿಸಿ ಅಲ್ಲಲ್ಲಿ ಕಸ ಹಾಕುವದನ್ನು ನಿಯಂತ್ರಿಸಬೇಕು. ಎಲ್ಲಾ ಸದಸ್ಯರು ತಮ್ಮ ವಾರ್ಡಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಮಡಿಕೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿ ಲಕ್ಷಿö್ಮÃ ಚಂದ್ರಶೇಖರ್ ಮಾತನಾಡಿ, ಗ್ರಂಥಾಲಯದಲ್ಲಿ ಐದು ಸಾವಿರ ಪುಸ್ತಕಗಳಿವೆ. ೧೬ ಸಾವಿರ ಪುಸ್ತಕಗಳನ್ನು ಆನ್‌ಲೈನ್‌ನಲ್ಲಿ ಓದಬಹುದು. ಒಂದು ವಾರದಲ್ಲಿ ಐ.ಎ.ಎಸ್, ಐ.ಪಿ.ಎಸ್, ಕೆ.ಎ.ಎಸ್ ಪರೀಕ್ಷೆಗಳಿಗೆ ಅಗತ್ಯವಾದ ಪುಸ್ತಕಗಳನ್ನು ಒದಗಿಸಲಾಗುವದು ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಎಸ್.ಪಾರ್ವತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಮಹಮ್ಮದ್ ಖುರೇಶಿ, ತಾ.ಪಂ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಸದಸ್ಯೆ ನೆರೆಯಂಡಮ್ಮAಡ ಉಮಾಪ್ರಭು, ಜಿಲ್ಲಾ ಪರಿಷತ್ ಮಾಜಿ ಉಪಾಧ್ಯಕ್ಷ ಪಿ.ಎಂ.ಖಾಸಿA, ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ಹೆಚ್. ಅಬ್ದುಲ್ ರಹಿಮಾನ್, ಜೆ.ಡಿ.ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ ಮನ್ಸೂರ್ ಅಲಿ, ನಿವೃತ್ತ ಶಿಕ್ಷಕ ಚೋಕಿರ ಪೊನ್ನಪ್ಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಮತ್ತಿತರರು ಇದ್ದರು.