ಶನಿವಾರಸಂತೆ, ಮಾ. ೬: ಬೈಕ್‌ಗೆ ಟ್ರಕ್ಕೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಹ್ಯಾಂಡ್‌ಪೋಸ್ಟ್ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅರಕಲಗೂಡು ತಾಲೂಕಿನ ತಾರಿಗಳಲೆ ಗ್ರಾಮದ ಮೂರ್ತಿ ಆಚಾರ್ (೫೭) ಗಾಯಗೊಂಡ ಬೈಕ್ ಸವಾರ. ಬಾಳುಪೇಟೆಯ ಟ್ರಕ್ ಚಾಲಕ ಧರ್ಮ ಪ್ರಕಾಶ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಚಾಲಕನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕೊಡ್ಲಿಪೇಟೆ ಉಪ ಠಾಣೆ ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.