ಮಡಿಕೇರಿ, ಮಾ. ೬: ಯುನೈಟೆಡ್ ಪ್ಲಾಂಟೇಷನ್ ವಕರ‍್ಸ್ ಯೂನಿಯನ್‌ನ ೧೦ನೇ ರಾಜ್ಯ ಸಮ್ಮೇಳನದಲ್ಲಿ ದಿನಗೂಲಿ ಕಾರ್ಮಿಕರಿಗೆ ೬೦೦ ರೂ. ವೇತನ ನೀಡಬೇಕೆಂಬ ಆಗ್ರಹದ ಜತೆಗೆ ಪ್ರಮುಖ ೫ ನಿರ್ಣಯ ಕೈಗೊಳ್ಳಲಾಗಿದೆ ಎಂದು ಯೂನಿ ಯನ್‌ನ ಪ್ರಧಾನ ಕಾರ್ಯದರ್ಶಿ ಕೆ. ಗುಣಶೇಖರ್ ಮಾಹಿತಿ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಫೆ. ೨೮ ರಂದು ಸೋಮವಾರಪೇಟೆ ಮಾನಸ ಹಾಲ್‌ನಲ್ಲಿ ಆಯೋಜಿಸಿದ್ದ ರಾಜ್ಯ ಸಮ್ಮೇಳನದಲ್ಲಿ ಎಐಟಿಯುಸಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಎ.ಡಿ. ವಿಜಯ ಭಾಸ್ಕರ್, ಭಾರತ ಕಮ್ಯೂನಿಸ್ಟ್ ಪಕ್ಷದ ಚಿಕ್ಕಮಗಳೂರು ಕಾರ್ಯದರ್ಶಿ ಎಚ್.ಎಂ. ರೇಣುಕಾರಾಧ್ಯ ಸಮ್ಮುಖದಲ್ಲಿ ಕಾರ್ಮಿಕ ವಿರೋಧಿ, ರೈತ ವಿರೋಧಿ ಕಾಯ್ದೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲೆಯ ಕಾರ್ಮಿಕರಿಗೆ ಕಳೆದ ಮೂರು ವರ್ಷದಿಂದ ದಿನಗೂಲಿಯಾಗಿ ನೀಡುತ್ತಿರುವ ರೂ. ೩೪೦ ಅನ್ನು, ಸರ್ಕಾರ ಕನಿಷ್ಟ ವೇತನವಾಗಿ ರೂ. ೬೦೦ ನಿಗದಿ ಮಾಡಿ ಆದೇಶ ನೀಡಬೇಕು. ಈ ಸಂಬAಧ ಸರ್ಕಾರದ ಗಮನ ಸೆಳೆಯಲು ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ಕೊಡಗು ಮತ್ತು ಹಾಸನ ಜಿಲ್ಲೆಯಲ್ಲಿ ಹೆಚ್ಚಾಗಿ ಕಾಫಿ ಉತ್ಪಾದನೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ನೀಡುವುದರ ಜೊತೆಗೆ ಬೆಂಬಲ ಬೆಲೆ ನಿಗದಿ ಮಾಡಬೇಕು. ವನ್ಯಜೀವಿ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ರೂ. ೨೫ ಲಕ್ಷ ಪರಿಹಾರ ನೀಡಬೇಕು. ಹೊರ ರಾಜ್ಯದಿಂದ ಆಗಮಿಸಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಪಡೆದವರಿಗೆ, ಗ್ರಾ.ಪಂ. ವ್ಯಾಪ್ತಿಯಲ್ಲಿರುವ ನಿವೇಶನ ರಹಿತರಿಗೆ ನಿವೇಶನ ನೀಡಬೇಕು. ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಯನ್ನು ಹಿಂಪಡೆಯುವAತೆ ಆಗ್ರಹಿಸಿ ಹೋರಾಟ ರೂಪಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಎಐಟಿಯುಸಿಯ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಯ ಅಧ್ಯಕ್ಷರಾಗಿ ಶೇಷಾದ್ರಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಎಂ.ಸಿ. ಡೋಂಗ್ರೇ, ಉಪಾಧ್ಯಕ್ಷರಾಗಿ ಎನ್. ಮಣಿ, ಸಿದ್ದಬಸವಯ್ಯ, ಬಿ. ಅಮ್ಜತ್, ಪ್ರಧಾನ ಕಾರ್ಯದರ್ಶಿಯಾಗಿ ಕೆ. ಗುಣಶೇಖರ್, ಕಾರ್ಯದರ್ಶಿಯಾಗಿ ಹೆಚ್.ಎಂ. ಸೋಮಪ್ಪ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಹೆಚ್.ಎಂ. ಸೋಮಪ್ಪ, ಸಿ. ಧರ್ಮರಾಜು ಇದ್ದರು.