ಮಡಿಕೇರಿ, ಮಾ. ೬: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ (ಕೋಟೆ) ಅವರು ತಾ. ೯ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ತಾ. ೯ ರಂದು ಬೆಳಿಗ್ಗೆ ೮ ಗಂಟೆಗೆ ನಗರದ ಪೌರಕಾರ್ಮಿಕರ ಕಾಲೋನಿಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣ ಹಾಗೂ ಇನ್ನಿತರ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ. ಬಳಿಕ ೧೧ ಗಂಟೆಗೆ ಪ್ರತಿಕಾಗೋಷ್ಠಿ, ಮಧ್ಯಾಹ್ನ ೧೨ ಗಂಟೆಗೆ ಎಲ್ಲಾ ಸಂಬAಧಪಟ್ಟ ಅಧಿಕಾರಿಗಳಿಗೆ ಎಂ.ಎಸ್. ೨೦೧೩ರ ಅನುಷ್ಠಾನದ ಬಗ್ಗೆ ತರಬೇತಿ, ಬಳಿಕ ಮಧ್ಯಾಹ್ನ ೨ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.