ಸೋಮವಾರಪೇಟೆ, ಮಾ. ೬: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಧ್ಯೇಯೊದ್ಧೇಶಗಳನ್ನು ಕಾರ್ಯಗತ ಗೊಳಿಸಲು ಇಲಾಖೆ ಮುಂದಾಗಿದ್ದು, ಈ ಕಾರ್ಯಕ್ಕೆ ತರಬೇತಿ ಪಡೆದ ಎಲ್ಲಾ ಶಿಕ್ಷಕರು ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಸೂಚಿಸಿದರು.
ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಳೆದ ಅವಧಿಯಲ್ಲಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ನಡೆಸಲು ಕೋವಿಡ್-೧೯ ಅಡ್ಡಿಯಾದ ಸಂದರ್ಭ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ಸೋಮವಾರಪೇಟೆ, ಮಾ. ೬: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಧ್ಯೇಯೊದ್ಧೇಶಗಳನ್ನು ಕಾರ್ಯಗತ ಗೊಳಿಸಲು ಇಲಾಖೆ ಮುಂದಾಗಿದ್ದು, ಈ ಕಾರ್ಯಕ್ಕೆ ತರಬೇತಿ ಪಡೆದ ಎಲ್ಲಾ ಶಿಕ್ಷಕರು ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಸೂಚಿಸಿದರು.
ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಳೆದ ಅವಧಿಯಲ್ಲಿ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ನಡೆಸಲು ಕೋವಿಡ್-೧೯ ಅಡ್ಡಿಯಾದ ಸಂದರ್ಭ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ಹಿಂಪಡೆಯಬೇಕಾಗುತ್ತದೆ ಎಂದು ಎಚ್ಚರಿಸಿದರು. ಮುಂದಿನ ಜೂನ್ ತಿಂಗಳಿAದ ಶಾಲಾ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ, ತಾಲೂಕು ಮಟ್ಟದಲ್ಲಿ ಮಾಡುವ ಶಿಬಿರ, ಚಾರಣ, ಕಾರ್ಯಾಗಾರಗಳ ಬಗ್ಗೆ ಸಮಗ್ರ ಕ್ರಿಯಾ ಯೋಜನೆಯನ್ನು ರೂಪಿಸಿ ಕೊಂಡು ಅದರ ಯಶಸ್ಸಿಗಾಗಿ ಕಾರ್ಯನಿರ್ವಹಿಸಿ, ಆ ಕಾರ್ಯಗಳಿಗೆ ಇಲಾಖೆ ಸಮಗ್ರ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಕೋಶಾಧಿಕಾರಿ ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಬೆಳಗ್ಗಿನಿಂದ ಸಂಜೆಯವರೆಗೂ ಕೇವಲ ಪಾಠ ಪ್ರವಚನಗಳಲ್ಲಿಯೇ ಮುಳುಗಿದರೆ, ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಯಲ್ಲಿ ಸಮಸ್ಯೆಯಾಗಲಿದ್ದು, ದಿನದ ಒಂದು ಅವಧಿ
ಸ್ಕೌಟ್ಸ್ ಮತ್ತು ಗೈಡ್ಸ್ನ ಚಟುವಟಿಕೆ, ಕ್ರೀಡೆ, ಮನರಂಜನೆಗಳಲ್ಲಿ ತೊಡಗಿಸಿಕೊಂಡಲ್ಲಿ ವಿದ್ಯಾರ್ಥಿಗಳು ಹರ್ಷೋಲ್ಲಾಸದೊಂದಿಗೆ ಸರ್ವಾಂಗೀಣ ಅಭಿವೃದ್ಧಿ ಸಾಧಿಸಲಿದ್ದಾರೆ ಎಂದರು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಸೋಮವಾರಪೇಟೆ ತಾಲೂಕು ಸಂಸ್ಥೆ ಅಧ್ಯಕ್ಷ ಬಿ.ಎ. ಭಾಸ್ಕರ್ ವಹಿಸಿದ್ದರು. ವೇದಿಕೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ಡಾ. ಸದಾಶಿವಯ್ಯ ಎಸ್ ಪಲ್ಲೆದ್, ಸ್ಕೌಟ್ಸ್ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ, ಸೋಮವಾರಪೇಟೆ ಸಂಸ್ಥೆ ಕಾರ್ಯದರ್ಶಿ ಚಂದ್ರಶೇಖರ್, ಕುಶಾಲನಗರ ಸಂಸ್ಥೆ ಅಧ್ಯಕ್ಷ ಎನ್.ಎಲ್. ಸುರೇಶ್‌ಕುಮಾರ್, ಕಾರ್ಯದರ್ಶಿ ದೇವಾನಂದ್, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಪದವೀಧರ ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಂಘಟಕರುಗಳಾದ ದಮಯಂತಿ, ರಂಜಿನಿ, ಸ್ಥಳೀಯ ಸಂಸ್ಥೆ ಖಜಾಂಚಿ ಚಂದ್ರಕಲಾ, ಮಾನೆ ರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.