ಮಡಿಕೇರಿ, ಮಾ. ೬: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಅಂತರ ಕಾಲೇಜು ಹಾಕಿ ಪಂದ್ಯಾವಳಿಯಲ್ಲಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ೯ ತಂಡಗಳು ಭಾಗವಹಿಸಿದ್ದ ಈ ಪಂದ್ಯಾವಳಿಯು ಲೀಗ್ ಹಾಗೂ ನಾಕೌಟ್ ಮಾದರಿಯಲ್ಲಿ ನಡೆಯಿತು. ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ ಸೋಮಣ್ಣ ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿ ಗಳಿಸಿದರು. ದ್ವಿತೀಯ ಬಿಕಾಂ ವಿದ್ಯಾರ್ಥಿ ಬೆಳ್ಯಪ್ಪ ಬಿ.ಎಸ್. ಉತ್ತಮ ಡಿಫೆಂಡರ್ ಪ್ರಶಸ್ತಿಯನ್ನು ಹಾಗೂ ದ್ವಿತೀಯ ಬಿಕಾಂ ವಿದ್ಯಾರ್ಥಿ ಚೇತನ್ ಅತಿ ಹೆಚ್ಚು ಗೋಲ್ ಗಳಿಸಿದ ಪ್ರಶಸ್ತಿಯನ್ನು ಪಡೆದುಕೊಂಡರು. ತರಬೇತುದಾರರಾಗಿ ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಕಂಬಿರAಡ ಬೋಪಣ್ಣ ಕಾರ್ಯನಿರ್ವಹಿಸಿದ್ದರು ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ತಿಳಿಸಿದ್ದಾರೆ.