ಮಡಿಕೇರಿ : ಹುಲಿತಾಳದ ಡಾ. ಭೀಮ್ರಾವ್ ಅಂಬೇಡ್ಕರ್ ಕ್ರೀಡಾ ಸಮಿತಿ ಮತ್ತು ದಲಿತ ನಾಗಾಸ್ ಕ್ರೀಡಾ ಅಕಾಡೆಮಿ ವತಿಯಿಂದ ತಾ. ೨೬ ರಿಂದ ೨೮ ರವರೆಗೆ ೧೯ನೇ ವಷÀðದ ಜೈ ಭೀಮ್ ಕಪ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಹೆಚ್.ಟಿ. ಹರೀಶ್ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. ೨೬ ರಿಂದ ಮೂರ್ನಾಡಿನ ವಿದ್ಯಾಸಂಸ್ಥೆಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ ಮತ್ತು ಯುವತಿಯರಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ವಿಜೇತ ತಂಡಕ್ಕೆ ರೂ. ೩೩,೩೩೩ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ ೨೨,೨೨೨ ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು.
ಪುರುಷರಿಗೆ ಕ್ರಿಕೆಟ್ ಪಂದ್ಯಾವಳಿ ಹಾಗೂ ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗಜಗ್ಗಾಟ ಪಂದ್ಯಾಟ ನಡೆಯಲಿದ್ದು, ಸಮಾರೋಪ ಸಮಾರಂಭದAದು ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ಹೆಚ್.ಎನ್. ವಿನೋದ್, ಕಾರ್ಯದರ್ಶಿ ಜಗದೀಶ್, ಸದಸ್ಯರಾದ ಹೆಚ್.ಜಿ. ಸೂರ್ಯ, ಹೆಚ್.ಸಿ. ನಂದಕುಮಾರ್, ಹೆಚ್.ಎನ್. ರೋಹಿತ್ ಇದ್ದರು.