ಮಡಿಕೇರಿ, ಮಾ. ೮: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮಾದಕ ವಸ್ತುಗಳಾದ, ಡ್ರಗ್ಸ್, ಗಾಂಜಾ ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಳಕೆಯಿಂದ ದೂರವಿದ್ದು, ಅದರ ವಿರುದ್ಧ ಹೋರಾಡುವಂತೆ ಒಲಿಂಪಿಯನ್, ಮಾಜಿ ಅಂರ‍್ರಾಷ್ಟಿçÃಯ ಹಾಕಿ ಆಟಗಾರ, ಕರ್ನಲ್ ಬಾಳೆಯಡ ಸುಬ್ರಮಣಿ ಕರೆ ನೀಡಿದರು.
ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೀನುಪೇಟೆ ಯಲ್ಲಿರುವ ಕಲಾ ಸಭಾಂಗಣದಲ್ಲಿ ನಡೆದ ಕ್ರೀಡಾ, ಸಾಂಸ್ಕೃತಿಕ ಮತ್ತು ವಿವಿಧ ಸಮಿತಿಗಳ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು, ಸೇನೆಗೆ ಸೇರಲು ಮುಂದಾಗಬೇಕು. ಹೆಣ್ಣು ಮಕ್ಕಳು ಕೂಡ ಕಳೆದ ಹತ್ತು ವರ್ಷಗಳಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುತ್ತಿದ್ದಾರೆ. ದೇಶ ಸೇವೆಗಿಂತ ದೊಡ್ಡ ಸೇವೆ ಮತ್ತೊಂದಿಲ್ಲ ಎಂದು ಬಾಳೆಯಡ ಕೆ.ಸುಬ್ರಮಣಿ ಹೇಳಿದರು.
ಸರ್ಕಾರಿ ಕಾಲೇಜುಗಳಲ್ಲಿ ಕ್ರೀಡೆಗಳಿಗೆ ಉತ್ತೇಜನ ನೀಡುವುದು ಕಡಿಮೆಯಾಗುತ್ತಿದೆ. ಸರಕಾರಿ ಶಾಲೆ, ಕಾಲೇಜಿನಲ್ಲಿ ಕ್ರೀಡಾ ಸಾಮಗ್ರಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಕ್ರೀಡಾಕೂಟಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ, ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದಾಗಿ ಘೋಷಿಸಿದರು.
ಜಾನಪದ ಪರಿಷತ್ ಅಧ್ಯಕ್ಷ ಡಾ. ಎಸ್.ಬಾಲಾಜಿ ಮಾತನಾಡಿ, ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ಜಾನಪದ ಕಲೆ, ಸಾಹಿತ್ಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಪ್ರಾಂಶುಪಾಲ ಡಾ. ಡಿ.ಕೆ ಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮನಗರ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಕೆ.ಸಿ ಕಾಂತಪ್ಪ, ಕಲಾ ಸಾಂಸ್ಕೃತಿಕ ಸಂಚಾಲಕ ಶೃತಿ ಪಾರ್ವತಿ, ಕ್ರೀಡಾ ಸಮಿತಿ ಸಂಚಾಲಕ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಾಕಿ ಪೂವಣ್ಣ, ಅಂಜು ಸುಬ್ರಮಣಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ, ಮುಳ್ಳಂಗಡ ಕುಟ್ಟಪ್ಪ, ನಿವೃತ್ತ ಪ್ರಾಂಶುಪಾಲರಾದ ಪಳಗಂಡ ಭಗೀರಥಿ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕಿ ನೆರವಂಡ ದೇಚಮ್ಮ, ನಿವೃತ್ತ ಶಿಕ್ಷಕ ಲಕ್ಷಿö್ಮ ನಾರಾಯಣ್, ವೀರಾಜಪೇಟೆ ಪೊಲೀಸ್ ಠಾಣಾಧಿಕಾರಿ ಕಾವೇರಮ್ಮ, ಕಾಲೇಜು ವಿವಿಧ ಸಮಿತಿಗಳ ಪದಾಧಿಕಾರಿಗಳು, ಉಪನ್ಯಾಸಕರು, ಭೋದಕೇತರ ಸಿಬ್ಬಂದಿಗಳು ಹಾಜರಿದ್ದರು.
- ಇಸ್ಮಾಯಿಲ್, ಕಂಡಕೆರೆ