ಮಡಿಕೇರಿ, ಮಾ. ೮: ಅಕಾಲಿಕ ಮಳೆ, ಪ್ರಾಕೃತಿಕ ವಿಕೋಪ, ವನ್ಯಜೀವಿ-ಮಾನವ ಸಂಘರ್ಷ, ಕೊರೊನಾ ಪರಿಸ್ಥಿತಿಯಿಂದ ಕಂಗೆಟ್ಟಿರುವ ಕೊಡಗು ಜಿಲ್ಲೆಗೆ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಲ್ಲಿ ಯಾವುದೇ ನಿರೀಕ್ಷಿತ ಯೋಜನೆಗಳು ಘೋಷಣೆಯಾಗಿಲ್ಲ. ಇದರಿಂದ ಸಹಜವಾಗಿ ಕೊಡಗಿನ ಜನರಿಗೆ ನಿರಾಸೆ ಉಂಟಾಗಿದೆ. ಹಲವು ನಿರೀಕ್ಷೆಗಳು ಹುಸಿಯಾಗಿವೆ. ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ೨೦೨೧-೨೦೨೨ನೇ ಸಾಲಿನ ಆಯ ವ್ಯಯ ಮಂಡಿಸಿದರು. ಕೊಡಗು ಜಿಲ್ಲೆಗೆ ಏಕೈಕ ಯೋಜನೆಯಾಗಿ ಪೊಲೀಸ್ ಸಂಕೀರ್ಣ ನಿರ್ಮಾಣಕ್ಕೆ ೮ ಕೋಟಿ ಹಣವನ್ನು ಸರಕಾರ ಹಂಚಿಕೆ ಮಾಡಿದೆ, ಇದನ್ನು ಹೊರತುಪಡಿಸಿ ಬೇರೆ ಯಾವುದೇ ಹೊಸ ಯೋಜನೆಗಳು ಕೊಡಗಿಗೆ ಇಲ್ಲದಿರುವುದು ಬೇಸರ ತರಿಸಿದೆ. ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಬಜೆಟ್ ಭಾಷಣದ ವೇಳೆ ಕೊಡಗಿನ ರಸ್ತೆ ಸ್ಥಿತಿಗತಿ ಬಗ್ಗೆ ಪ್ರಸ್ತಾಪಿಸಿದ್ದು,

(ಮೊದಲ ಪುಟದಿಂದ) ಈ ಹಿಂದೆ ಕೊಡಗು ವಿಶೇಷ ಪ್ಯಾಕೇಜ್‌ನಡಿ ಘೋಷಣೆ ಮಾಡಿದ್ದ ರೂ. ೧೦೦ ಕೋಟಿಯಲ್ಲಿ ಬಾಕಿ ಉಳಿದಿದ್ದ ರೂ. ೪೦ ಕೋಟಿ ಹಣವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದರೊಂದಿಗೆ ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆ ಘೋಷಿಸಿದ್ದು, ಧಾರ್ಮಿಕ ಕೇಂದ್ರಗಳಿಗೆ, ವಿವಿಧ ಜಾತಿಗಳ ನಿಗಮಗಳಿಗೆ ಬಂಪರ್ ಕೊಡುಗೆ ನೀಡಲಾಗಿದೆ.

ಬಜೆಟ್‌ನಲ್ಲಿ ಘೋಷಣೆಯಾದ ಬೆರೆಳೆಣಿಕೆ ಯೋಜನೆಗಳು ಕೊಡಗಿಗೆ ಪೂರಕವಾಗುವ ಸಾಧ್ಯತೆ ಇವೆ. ರೈತ ಉತ್ಪಾದಕ ಸಂಸ್ಥೆಗಳು ಮಾರಾಟ ಮಾಡುವ ತೋಟಗಾರಿಕೆ ಉತ್ಪನ್ನಗಳಿಗೆ ಬ್ರಾಂಡ್ ವ್ಯಾಲ್ಯೂ ಕಲ್ಪಿಸಲು ಹಾಗೂ ಉತ್ತಮ ಮಾರುಕಟ್ಟೆ ಒದಗಿಸಲು ಒತ್ತು ನೀಡಲಾಗಿದೆ. ಅಡಿಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತು ಸಂಶೋಧನೆ ಹಾಗೂ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು ರೂ ೨೫ ಕೋಟಿ ಮೀಸಲಿಡಲಾಗುತ್ತಿದ್ದು, ಇದರಿಂದ ಕೊಡಗು ಜಿಲ್ಲೆಯ ಸಂಪಾಜೆ, ಕರಿಕೆ ಹಾಗೂ ಜಿಲ್ಲೆಯಹಲವು ಇತರ ಭಾಗಗಳಿಗೆ ಸಹಕಾರಿಯಾಗಲಿದೆ. ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸುವ ಘೋಷಣೆಯಾಗಿರುವುದರಿಂದ ಜಿಲ್ಲೆಗೊಂದು ಗೋಶಾಲೆ ಬರಲಿದೆ. ಆಯ್ದ ೫೦ ಕರ್ನಾಟಕ ಪಬ್ಲಿಕ್ ಶಾಲೆಯ ಅಭಿವೃದ್ಧಿಗೆ ರೂ ೧೦೦ ಕೋಟಿ ಘೋಷಣೆ ಮಾಡಲಾಗಿದ್ದು, ಇದು ಕೊಡಗಿಗೆ ಪ್ರಯೋಜನವಾಗಲಿದೆಯಾ? ಎಂದು ಕಾದು ನೋಡಬೇಕಾಗಿದೆ. ರಾಜ್ಯದ ೨೫೦ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮವಹಿಸಲಾಗಿದ್ದು ಇದರಲ್ಲಿ ಕೊಡಗು ಜಿಲ್ಲೆಯ ಆಸ್ಪತ್ರೆ ಸೇರ್ಪಡೆಯಾಗಲಿದೆಯೇ? ಎಂಬುದು ಪ್ರಶ್ನೆಯಾಗಿದೆ.

ರಾಜ್ಯ ಬಜೆಟ್ ಗಾತ್ರ ೨ ಲಕ್ಷದ ೪೩ ಸಾವಿರದ ೭೩೪ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ್ದು, ಕೃಷಿ ಮತ್ತು ಪೂರಕ ಚಟುವಟಿಕೆ, ಆರ್ಥಿಕಾಭಿವೃದ್ಧಿ, ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ, ಬೆಂಗಳೂರು ಸಮಗ್ರ ಅಭಿವೃದ್ಧಿ, ಸಂಸ್ಕೃತಿ, ಪರಂಪರೆ, ನೈಸರ್ಗಿಕ ಸಂಪನ್ಮೂಲ ಎಂದು ವಿಂಗಡನೆ ಮಾಡಿ ಮಂಡನೆ ಮಾಡಿದ್ದಾರೆ.

ವನ್ಯಜೀವಿ ಹಾವಳಿ ತಡೆಗಿಲ್ಲ ಯೋಜನೆ :

ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆ ಹುಲಿ, ಕಾಡಾನೆ ಸೇರಿದಂತೆ ಇನ್ನಿತರ ವನ್ಯಜೀವಿ ಹಾವಳಿಯಿಂದ ತತ್ತರಿಸಿ ಹೋಗಿದೆ. ವನ್ಯಜೀವಿ-ಮಾನವ ಸಂಘರ್ಷದಿAದ ಜಿಲ್ಲೆಯ ಜನ ಭಯಭೀತರಾಗಿದ್ದಾರೆ. ರಾಜ್ಯ ಸರಕಾರ ಸಂಘರ್ಷ ಶಮನಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ಕೇವಲ ಹೆಸರಿಗಷ್ಟೆ ಅವೈಜ್ಞಾನಿಕ ಯೋಜನೆ ಘೋಷಿಸಿದೆ.

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ವನ್ಯಜೀವಿಗಳ ಸುಗಮ ಮತ್ತು ಅಬಾಧಿತ ಚಲನವಲನಕ್ಕೆ ಅವಶ್ಯವಿರುವ ಎರಡು ಅರಣ್ಯ ಪ್ರದೇಶಗಳ ಮಧ್ಯದ ಕಾರಿಡಾರ್ ಪ್ರದೇಶವನ್ನು ಸರಕಾರವು ಖರೀದಿಗೆ ನೀತಿ ರೂಪಿಸುವ ಭರವಸೆ ನೀಡಿದ್ದಾರೆ. ವನ್ಯಜೀವಿ ಹಾವಳಿಯಿಂದ ಉಂಟಾಗುತ್ತಿರುವ ಹಾನಿ ಪ್ರಕರಣಗಳಲ್ಲಿ ತ್ವರಿತವಾಗಿ ದಯಾತ್ಮಕ ಧನ ಪಾವತಿಸುವ ನಿಟ್ಟಿನಲ್ಲಿ ಅರಣ್ಯ ಇ-ಪರಿಹಾರ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ದಾಳಿಗೆ ಪರಿಹಾರ ನೀಡುವ ಬದಲು, ದಾಳಿಯನ್ನು ತಡೆಯಲು ಶಾಶ್ವತ ಯೋಜನೆ ರೂಪಿಸಲು ಕ್ರಮವಹಿಸಬೇಕಾಗಿತ್ತು. ಕೊಡಗಿನಲ್ಲಿ ನಡೆಯುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಸರಕಾರ ಮಹತ್ವ ಹಾಗೂ ವೈಜ್ಞಾನಿಕ ರೀತಿಯ ಯೋಜನೆ ಘೋಷಣೆ ಮಾಡಬೇಕಾಗಿತ್ತು ಎಂದು ಕೊಡಗಿನ ಜನ ವಿಶ್ಲೇಶಿಷಿದ್ದಾರೆ.

ಕಾಫಿ ಬೆಳೆಗಾರರಿಗಿಲ್ಲ ಪ್ಯಾಕೇಜ್ :

ಕೊಡಗಿನ ವಾಣಿಜ್ಯ ಬೆಳೆಯಾದ ಕಾಫಿ, ಕರಿಮೆಣಸು ಬೆಳೆಗಾರರಿಗೆ ಬಜೆಟ್ ನಿರಾಸೆ ತರಿಸಿದೆ. ವಿಶೇಷ ಪ್ಯಾಕೇಜ್‌ನ ನಿರೀಕ್ಷೆಯಲ್ಲಿದ್ದ ಕೊಡಗಿನ ಬೆಳಗಾರರು ಇದರಿಂದ ವಂಚಿತರಾಗಿದ್ದಾರೆ. ಅಕಾಲಿಕ ಮಳೆ, ಪ್ರಾಕೃತಿಕ ವಿಕೋಪದಿಂದ ನಲುಗಿರುವ ಬೆಳೆಗಾರರು ಸೂಕ್ತ ಬೆಲೆ ದೊರಕದೆ ತತ್ತರಗೊಂಡಿದ್ದಾರೆ. ಇವೆಲ್ಲ ಗಮನದಲ್ಲಿಟ್ಟುಕೊಂಡು ಸರಕಾರ ಕೊಡಗಿನ ಬೆಳೆಗಾರರಿಗೆ ಸಿಹಿ ಸುದ್ದಿ ನೀಡುತ್ತಾರೆ ಎಂಬ ನಿರೀಕ್ಷೆಗಳು ಜಿಲ್ಲೆಯ ಬೆಳೆಗಾರರಲ್ಲಿ ಮೂಡಿತ್ತು. ಆದರೆ ಅದು ಸುಳ್ಳಾಗಿದೆ.

ಪ್ರವಾಸೋದ್ಯಮಕ್ಕೆ ೫೦೦ ಕೋಟಿ :

ಪ್ರವಾಸೋದ್ಯಮ ಅಭಿವೃದ್ಧಿಗೆ ರೂ ೫೦೦ ಕೋಟಿಯನ್ನು ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದಾರೆ. ಆದರೆ, ಇದರಿಂದ ಕೊಡಗು ಜಿಲ್ಲೆಗೆ ಯಾವುದೇ ರೀತಿಯ ಪ್ರಯೋಜನವಿಲ್ಲ. ಪ್ರವಾಸಿಗರ ಸ್ವರ್ಗ ಎಂದು ಕರೆಸಿಕೊಳ್ಳುವ ಕೊಡಗು ಜಿಲ್ಲೆಗೆ ನಿರ್ದಿಷ್ಟವಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯಾವುದೇ ಯೋಜನೆ ಕೂಡ ಘೋಷಣೆಯಾಗಿಲ್ಲ.

ರಾಜ್ಯ ಪ್ರವಾಸೋದ್ಯಮ ನಿಗಮದ ವತಿಯಿಂದ ಬೆಂಗಳೂರು ಸುತ್ತಮುತ್ತ ಇರುವ ಪ್ರವಾಸಿ ತಾಣಗಳನ್ನೊಳಗೊಂಡ ವಾರಾಂತ್ಯ ಪ್ರವಾಸಿ ವೃತ್ತದ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಕಾವೇರಿ ನೀರಾವರಿ ನಿಗಮದ ವತಿಯಿಂದ ಮೈಸೂರು ಜಿಲ್ಲೆಯ ಕಬಿನಿ ಅಣೆಕಟ್ಟಿನ ಕೆಳಭಾಗದಲ್ಲಿ ರೂ ೫೦ ಕೋಟಿ ವೆಚ್ಚದಲ್ಲಿ ಉದ್ಯಾನ ಅಭಿವೃದ್ಧಿ, ಉಡುಪಿ ಜಿಲ್ಲೆಯ ತಾಸ್ರಿ, ಮರವಂತೆ, ಒತ್ತಿನೆಣೆ ಹಾಗೂ ಇತರೆ ಕಡಲ ತೀರಗಳನ್ನು ಅಂತರಾಷ್ಟಿçÃಯ ದರ್ಜೆಗೇರಿಸಲು ರೂ ೧೦ ಕೋಟಿ, ಉಡುಪಿಯ ಸೋಮೇಶ್ವರ ಕಡಲ ತೀರಗಳನ್ನು ಅಂತರಾಷ್ಟಿçÃಯ ದರ್ಜೆಗೇರಿಸಲು ರೂ ೧೦ ಕೋಟಿ ವಿನಿಯೋಗಿಸಲಾಗುತ್ತದೆ.

ಕ್ರೀಡಾ ತವರಿಗೆ ಶೂನ್ಯ :

ಬಜೆಟ್‌ನಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಯ ಘೋಷಣೆಯ ನಿರೀಕ್ಷೆಗಳಿತ್ತು ಆದರೆ, ಅದು ಕೂಡ ಇದೀಗ ಹುಸಿಯಾಗಿದ್ದು, ಕ್ರೀಡಾ ಕ್ಷೇತ್ರಕ್ಕೆ ಯಾವುದೇ ಯೋಜನೆ ರೂಪಿಸಿಲ್ಲದಿರುವುದು ಕ್ರೀಡಾ ತವರಾಗಿರುವ ಕೊಡಗು ಜಿಲ್ಲೆಯ ಕ್ರೀಡಾಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ದೇವನಹಳ್ಳಿಯಲ್ಲಿ ಅಂತರಾಷ್ಟಿçÃಯ ಮಟ್ಟದ ಕ್ರೀಡಾ ಮೂಲಸೌಲಭ್ಯ ಸೃಜನತೆ, ರೂ ೧೦ ಕೋಟಿ ವೆಚ್ಚದಲ್ಲಿ ಮಂಡ್ಯ ನಗರದ ಕ್ರೀಡಾಂಗಣದ ಉನ್ನತೀಕರಣಕ್ಕೆ ಸರಕಾರ ಮುಂದಾಗಿದೆ.

ಕೃಷಿ ಕ್ಷೇತ್ರಕ್ಕೆ ರೂ ೩೧,೦೨೮ ಕೋಟಿ :

ಬಜೆಟ್‌ನಲ್ಲಿ ರಾಜ್ಯದಲ್ಲಿ ಕೃಷಿ ಕ್ಷೇತ್ರಕ್ಕೆ, ರೈತರಿಗೆ ಉಪಯೋಗವಾಗುವ ಹಲವು ಯೋಜನೆಗಳನ್ನು ಬಿ.ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ೩೧,೦೨೮ ಕೋಟಿ ರೂ.ಅನುದಾನ ನೀಡಲಾಗಿದೆ.

ಹಸಿರೆಲೆ ಗೊಬ್ಬರಕ್ಕೆ ೧೦ ಕೋಟಿ, ಸಾವಯವ, ಸಿರಿಧಾನ್ಯ ಮಾರಾಟಕ್ಕೆ ಇ ಮಾರುಕಟ್ಟೆ ಪ್ರೆöÊವೇಟ್ ಲಿಮಿಟೆಡ್, ಅಡಿಕೆ ಬೆಳೆಗೆ ೨೫ ಕೋಟಿ ರೂಪಾಯಿ ಮೀಸಲಿಡುವುದಾಗಿ ಘೋಷಿಸಿದ್ದಾರೆ. ಇನ್ನು ಕೃಷಿ ವಿಶ್ವ ವಿದ್ಯಾಲಯದಲ್ಲಿ ಓದುವ ರೈತರ ಮಕ್ಕಳಿಗೆ ಶೇ.೪೦-೫೦ ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದಾರೆ. ೭೫ ಕೋಟಿ ರೂಪಾಯಿ ವೆಚ್ಚದಲ್ಲಿ ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸುವುದಾಗಿ ಹೇಳಿದ್ದಾರೆ. ಬ್ಯಾಡಗಿ ಮೆಣಸಿನಕಾಯಿಗಾಗಿ ಗುಣ ವಿಶ್ಲೇಷಣಾ ಘಟಕ ಸ್ಥಾಪನೆ, ಸಾವಯವ ಕೃಷಿಗೆ ೫೦೦ ಕೋಟಿ ರೂಪಾಯಿ, ಸಿಂಗೇನ ಅಗ್ರಹಾರದಲ್ಲಿ ತರಕಾರಿ ಮಾರುಕಟ್ಟೆ, ಗೋದಾಮು ಮತ್ತು ಅಂಗಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಹ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರಧಾನಮಂತ್ರಿ ಮತ್ಸö್ಯ ಯೋಜನೆಗೆ ರೂ ೬೫ ಕೋಟಿ, ಕಿರು ಆಹಾರ ಸಂಸ್ಕರಣ ಉದ್ಯಮಕ್ಕೆ ೫೦ ಕೋಟಿ ರೂಪಾಯಿ, ಹಳದಿ ಎಲೆರೋಗ ಸಂಶೋಧನೆಗೆ ೨೫ ಕೋಟಿ ರೂಪಾಯಿ ಮೀಸಲಿಡುವುದಾಗಿ ಘೋಷಿಸಿದ್ದಾರೆ. ಬೇಡ್ತಿ, ವರದಾ ನದಿ ಜೋಡಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ಬಾರಿ ನೀರಾವರಿ ಮತ್ತು ಮಾರುಕಟ್ಟೆ ವ್ಯವಸ್ಥೆ ಒದಗಿಸುವತ್ತ ಯಡಿಯೂರಪ್ಪ ಸರಕಾರ ಹೆಚ್ಚು ಗಮನಹರಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಕೃಷಿ ಉತ್ಪನ್ನ ಆಧಾರಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ಹಮ್ಮಿಕೊಂಡಿದೆ. ಜತೆಗೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಸಿಂಗೇನ ಅಗ್ರಹಾರದಲ್ಲಿ ಹಣ್ಣು ಮಾರುಕಟ್ಟೆ ನಿರ್ಮಾಣ, ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆ ನಿರ್ಮಾಣ, ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು ೪ ಕೋಟಿ ರೂಪಾಯಿ ವೆಚ್ಚದಲ್ಲಿ ಮೆಣಸಿನಕಾಯಿ ಸಂಶೋಧನಾ ಕೇಂದ್ರ ಸ್ಥಾಪನೆ, ಉತ್ತರ ಕರ್ನಾಟಕದ ೬ ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಒದಗಿಸಲು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ ೩ರ ಜಾರಿಗೆ ಯೋಜನೆ ಕೈಗೊಳ್ಳಲಾಗಿದೆ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಕೆರೆಗಳಿಗೆ ನೀರು ಹರಿಸುವ ಯೋಜನೆಗಳು, ರಾಜ್ಯದ ಎಲ್ಲ ಏತ ನೀರಾವರಿ ಯೋಜನೆಗಳ ಸೂಕ್ತ ನಿರ್ವಹಣೆಗೆ ಯೋಜನೆ, ಏತ ನೀರಾವರಿ ಮೂಲಕ ರಾಜ್ಯದ ೫ ಲಕ್ಷ ಹೆಕ್ಟೇರ್ ಭೂಮಿಗೆ ಹೆಚ್ಚುವರಿ ನೀರಾವರಿ ಒದಗಿಸುವ ಗುರಿ, ಬೇಡ್ತಿ - ವರದಾ ನದಿ ಜೋಡಣೆ ಯೋಜನೆ ಅನುಷ್ಠಾನ ಯೋಜನೆಯನ್ನು ಘೋಷಿಸಲಾಗಿದೆ.

ಶಿಕ್ಷಣ ಕ್ಷೇತ್ರಕ್ಕೆ ಏನಿದೆ.? ;

ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ ೫೦ ಕೋಟಿ ರೂಪಾಯಿ ಮೀಸಲು, ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ ೫೦ ಕೋಟಿ ರೂ.ಅನುದಾನ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗಾಗಿ ೧೦೦ ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ, ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಶೇ.೪೦-೫೦ ರಷ್ಟು ಮೀಸಲಾತಿ, ಶಿವಮೊಗ್ಗದ ಆಯುರ್ವೇದ ಕಾಲೇಜು ಆಯುಷ್ ವಿವಿಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಜಿಲ್ಲಾ ಕೇಂದ್ರಗಳಲ್ಲಿ ಮೆಟ್ರಿಕ್ ನಂತರದ ಹಾಸ್ಟೆಲ್‌ಗಳ ಸ್ಥಾಪನೆ ಮಾಡುವುದಾಗಿ ಹೇಳಿರುವ ಯಡಿಯೂರಪ್ಪ ಇದಕ್ಕಾಗಿ ೫೦ ಕೋಟಿ ರೂಪಾಯಿ ವ್ಯಯಿಸಲಾಗುವುದು, ಇದರಿಂದ ಸಾವಿರಾರೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ರಾಜ್ಯದ ೪ ವಿಭಾಗಗಳಲ್ಲಿ ಮುರಾರ್ಜಿ ವಸತಿ ಶಾಲೆ ಆರಂಭಿಸಲಾಗುವುದು, ಪರಿಶಿಷ್ಟ ಪಂಗಡದ ಆಶ್ರಮದ ಶಾಲೆಗಳಿಗೆ ವಾಲ್ಮೀಕಿ ಶಾಲೆಗಳೆಂದು ಮರು ನಾಮಕರಣ ಮಾಡಲಾಗುವುದು. ರಾಜ್ಯದ ೪೦೦ ಸರ್ಕಾರಿ ಉರ್ದು ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆಗೆ ಅವಕಾಶ ಕಲ್ಪಿಸಲಾಗುವುದು. ನುರಿತ ಮಾನವ ಸಂಪನ್ಮೂಲ ಅಭಿವೃದ್ದಿಗೆ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ೧೫೦ ಸರ್ಕಾರಿ ತರಬೇತಿ ಸಂಸ್ಥೆಗಳಿಗೆ ೪ ಸಾವಿರದ ೬೩೬ ಕೋಟಿ ಅನುದಾನ ನೀಡಲಾಗುವುದು. ಇದರಲ್ಲಿ ೪೦೮೦ ಕೋಟಿ ರೂಪಾಯಿಗಳನ್ನು ಟಾಟಾ ಟೆಕ್ನಾಲಜಿಸ್ ಲಿಮಿಟೆಡ್ ಭರಿಸಲಿದೆ. ಶಿಕ್ಷಕರ ತರಬೇತಿ ಕೇಂದ್ರಕ್ಕೆ ೧೮ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಮಹಿಳೆಯರಿಗೆ ಬಜೆಟ್ ಉಡುಗೊರೆ :

ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಬಜೆಟ್‌ನಲ್ಲಿ ಭರ್ಜರಿ ಉಡುಗೊರೆ ನೀಡಿದ್ದಾರೆ.

ಯಡಿಯೂರಪ್ಪ ಅವರು ಮಹಿಳೆಯರಿಗೆ ವಿಶೇಷವಾದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಒಟ್ಟಾರೆ ರೂ.೩೭,೧೮೮ ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ. ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ಇತರ ಮಹಾನಗರಗಳಲ್ಲಿರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರಗಳಾಗಿ ಉನ್ನತೀಕರಣ, ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡು ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಶಿಶು ಪಾಲನಾ ಕೇಂದ್ರ ತೆರೆಯಲು ಕ್ರಮ, ಸೇವಾ ವಲಯದ ಮಹಿಳಾ ಉದ್ಯಮಿಗಳಿಗೆ ಶೇ.೪ರ ರಿಯಾಯಿತಿ ಬಡ್ಡಿದರಲ್ಲಿ ಮಹಿಳಾ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿAದ ರೂ.೨ ಕೋಟಿ ವರೆಗೆ ಸಾಲ ಸೌಲಭ್ಯ ಒದಗಲಿದೆ.ಞ

ಸಂಜೀವಿನ ವ್ಯಾಪ್ತಿಯ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳಿಗೆ ಆರು ಸಾವಿರ ಸಣ್ಣ ಉದ್ಯಮ ಸ್ಥಾಪನೆಗೆ ಪಂಚಾಯತ್ ರಾಜ್ ಸಂಸ್ಥೆಗಳ ಮೂಲಕ ಬೆಂಬಲ, ೬೦ ಸಾವಿರ ಮಹಿಳೆಯರಿಗೆ ಅನುಕೂಲ, ಮಹಿಳೆಯರ ಸಣ್ಣ ಉದ್ಯಮಗಳಿಗೆ ತಾಂತ್ರಿಕ ನೆರವು ೨,೨೬೦ ಕಿರು ಉದ್ದಿಮೆಗಳ ಮೂಲಕ ೨೫ ಸಾವಿರ ಮಹಿಳೆಯರಿಗೆ ಉತ್ತೇಜನ, ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ವಿಭಾಗ ಮಟ್ಟದಲ್ಲಿ ವಾರ್ಷಿಕ ಮೇಳ ಆಯೋಜನೆ ಹಾಗೂ ಇ-ಮಾರುಕಟ್ಟೆ ಸೌಲಭ್ಯ ಜಾರಿ. ಮಹಿಳೆಯರು ಉದ್ಯೋಗ ಕೈಗೊಳ್ಳಲು ಪೂರಕ ವಾತಾವರಣ ನಿರ್ಮಾಣಕ್ಕಾಗಿ ವಿವಿಧ ನಿಯಾಮಾವಳಿಗಳ ಮರು ಪರಿಶೀಲನೆ, ಮಹಿಳಾ ಆಯವ್ಯಯ ಮತ್ತು ಮಕ್ಕಳ ಆಯವ್ಯಯವನ್ನು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅಳವಡಿಸಲು, ಸೇಫ್ ಸಿಟಿ ಯೋಜನೆಯಡಿ ಬೆಂಗಳೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ ೭,೫೦೦ ಕ್ಯಾಮೆರಾ ಅಳವಡಿಕೆ, ತಂತ್ರಜ್ಞಾನ ಆಧಾರಿತ ಇ-ಬೀಟ್ ಮೂಲಕ ರಾತ್ರಿ ಗಸ್ತನ್ನು ತೀವ್ರಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ನೆರವು ಹಾಗೂ ಮಾರ್ಗದರ್ಶನ ನೀಡಲು ನಿಮ್ಹಾನ್ಸ್ ಮತ್ತು ರಾಷ್ಟಿçÃಯ ಕಾನೂನು ಶಾಲೆಯ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಲೈಸನ್ಸ್ ಪಡೆದ ಮಹಿಳೆಯರಿಗೆ ಪ್ರಾಂಗಣದಲ್ಲಿನ ನಿವೇಶನ, ಗೋದಾಮು, ಅಂಗಡಿ, ಅಂಗಡಿ ಗೋದಾಮುಗಳ ಹಂಚಿಕೆಯಲ್ಲಿ ಶೇ.೧೦ರಷ್ಟು ಮೀಸಲಾತಿ, ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ೬ ತಿಂಗಳ ಮಕ್ಕಳ ಆರೈಕೆ ರಜೆ ಸೌಲಭ್ಯ, ಮಹಿಳಾ ವಾಣಿಜ್ಯೋದ್ಯಮಿಗಳನ್ನು ಬೆಂಬಲಿಸಲು ಐದು ಕೋಟಿ ವೆಚ್ಚದಲ್ಲಿ ಇಡಬ್ಯೂಇ ಕಾರ್ಯಕ್ರಮ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಧಾರ್ಮಿಕ ಕೇಂದ್ರಗಳಿಗೆ ಅನುದಾನ :

ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ೨೦೨೧-೨೨ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ.

ಕ್ರೆöÊಸ್ತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ರೂ. ೨೦೦ ಕೋಟಿ, ವೀರಶೈವ ಲಿಂಗಾಯತ ಅಭಿವೃದ್ಧಿ ರೂ.೫೦೦ ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.

ಅಲ್ಪಸಂಖ್ಯಾತರಿಗೆ ೧,೫೦೦ ಕೋಟಿ ರೂಪಾಯಿ ಮೀಸಲು ಇರಿಸಲಾಗುವುದು. ಅಂತೆಯೇ ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಸ್ಥಾಪಿಸಿ, ನಿಗಮದ ಚಟುವಟಿಕೆಗೆ ೫೦೦ ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಹೇಳಿದ್ದಾರೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ೫೦ ಕೋಟಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ ರೂ. ೧೦ ಕೋಟಿ, ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ರೂ.೧೦ ಕೋಟಿ ಅನುದಾನ ಮೀಸಲಿಡಲಾಗಿದೆ.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ೫೦ ಕೋಟಿ ರೂ. ನೀಡಲಾಗುತ್ತಿದ್ದು, ಕಿತ್ತೂರು ಕೋಟೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುವುದು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗಾಗಿ ರೂ. ೫ ಕೋಟಿ, ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಶ್ರೀಗಳು ಹಾಗೂ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಸ್ಮೃತಿವನಕ್ಕಾಗಿ ರೂ. ೨ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿವಿಧ ಯೋಜನೆಯ ಘೋಷಣೆ :

೧೯೮ ಕೋಟಿ ರೂ ವೆಚ್ಚದಲ್ಲಿ ೫೫೦೦ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳಿಗೆ ಗರಿಷ್ಠ ರೂ ೧೦ ಲಕ್ಷ ತನಕ ಶೇ ೨೫ ರಷ್ಟು ಶೇರು ಬಂಡಾವಳ ಒದಗಿಸಲು ಕ್ರಮ ವಹಿಸಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ ೪ ರಷ್ಟು ಬಡ್ಡಿ ಸಹಾಯಧನ ಯೋಜನೆ ಮೂಲಕ ಮಳಿಗೆ, ಡೀಲರ್‌ಶಿಪ್, ಪ್ರಾಂಚೈಸಿ ಮತ್ತು ಹೊಟೇಲ್ ಉದ್ಯಮ ಆರಂಬಿಸಲು ವಿಸ್ತರಣೆ, ಗರಿಷ್ಠ ಒಂದು ಕೋಟಿ ತನಕ ಸಾಲ ಪಡೆಯಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ೨೫ ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಆರಂಭ, ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂಜೀವಿನಿ ಯೋಜನೆ ಮೂಲಕ ಮಹಿಳಾ ಸ್ವಸಹಾಯ ಸಂಘದಿAದ ರಚಿತವಾದ ಒಕ್ಕೂಟದ ಮೂಲಕ ಸಮಗ್ರ ಮತ್ತು ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆಗೆ ಕ್ರಮ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರೂ ೯ ಕೋಟಿ ವೆಚ್ಚದಲ್ಲಿ ಸ್ವಚ್ಛ ಕಲಿಕಾ ಕೇಂದ್ರಗಳ ಅಭಿವೃದ್ಧಿ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗಾರಿಕೆಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ಸ್ಲಾö್ಯಬ್ ನಿಗದಿಗೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ತೆರಿಗೆ ಹೊರೆ ಇಲ್ಲ :

ಕಳೆದ ವರ್ಷವಿಡೀ ರಾಜ್ಯದ ಜನತೆ ಕೋವಿಡ್-೧೯ ಸಂಕಷ್ಟದಿAದ ಆರ್ಥಿಕವಾಗಿ ಬಹಳ ನೊಂದು ಬೆಂದು ಹೋಗಿದ್ದಾರೆ, ಹೀಗಾಗಿ ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಂಡಿಸಿರುವ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಕೋವಿಡ್‌ನಿಂದ ಸಂಕಷ್ಟಕ್ಕೀಡಾಗಿರುವ ಜನತೆಗೆ ಮತ್ತಷ್ಟು ತೆರಿಗೆ ಹೊರೆ ವಿಧಿಸುವುದಿಲ್ಲ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಇಳಿಸುವುದಿಲ್ಲ. ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಹೀಗಾಗಿ ಇಂಧನದ ಮೇಲೆ ಹೊಸ ತೆರಿಗೆ ವಿಧಿಸುವುದಿಲ್ಲ, ಈಗಿರುವ ಮಾರಾಟ ತೆರಿಗೆ ಕಡಿತವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಆರ್ಥಿಕ ಸಾಲಿನಲ್ಲಿ ನಿರೀಕ್ಷೆ ಮಾಡಲಾಗಿದ್ದ ೨೮ ಸಾವಿರದ ೫೯೧ ಕೋಟಿ ತೆರಿಗೆಗೆ ಪ್ರತಿಯಾಗಿ ೨೦ ಸಾವಿರದ ೫೩ ಕೋಟಿ ರೂಪಾಯಿಗೆ ಇಳಿಕೆ ಮಾಡಲಾಗಿದೆ. ೨೦೨೧-೨೨ನೇ ಸಾಲಿಗೆ ೨೪ ಸಾವಿರದ ೨೭೩ ಕೋಟಿ ತೆರಿಗೆ ಪಾಲು ನೀಡುವುದಾಗಿ ಕೇಂದ್ರ ತಿಳಿಸಿದೆ. ರಾಜ್ಯದ ಜಿಎಸ್‌ಟಿ ಸಂಗ್ರಹ ಇಳಿಕೆಯಾಗಿದೆ. ಇದನ್ನು ಕೇಂದ್ರ ಸರ್ಕಾರ ನೀಡಬೇಕಿದೆ. ಆದರೆ ಕೇಂದ್ರ ಸರ್ಕಾರ ಸಾಲ ಪಡೆದು ಹಣ ನೀಡುವುದಾಗಿ ಹೇಳಿದೆ. ಈ ಸಾಲ ಮರುಪಾವತಿಯನ್ನು ಜಿಎಸ್‌ಟಿ ಮರುಪಾವತಿ ಉಪಕ್ರಮದಲ್ಲಿ ನೀಡುವುದಾಗಿ ಹೇಳಿದೆ ಎಂದರು.

೪೫ ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಶೇ. ೫ ರಿಂದ ೩ಕ್ಕೆ ಇಳಿಸಲಾಗಿದೆ. ಇದರಿಂದ ಮಧ್ಯಮ ವರ್ಗದ ನಗರ ಪ್ರದೇಶದ ನಿವಾಸಿಗಳಿಗೆ ಪ್ರಯೋಜನವಾಗಲಿದೆ.

ಆಡಳಿತ ಸುಧಾರಣೆಗೆ ಯೋಜನೆ :

ಅಶಕ್ತರು, ವೃದ್ಧರು, ವ�