ಮಡಿಕೇರಿ, ಮಾ. ೯: ಸಾಧನೆಯ ಗುರಿ ಮತ್ತು ಸಾಧಿಸುವ ಛÀಲ ಇದ್ದಾಗ ಮಾತ್ರ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯವೆಂದು ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರೂ ಆಗಿರುವ ಕಾರ್ಯದರ್ಶಿ ನೂರುನ್ನೀಸಾ ತಿಳಿಸಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ೧೦ ನೇ ತರಗತಿ ಪರೀಕ್ಷೆಯಲ್ಲಿ ಶೇ.೧೦೦ ರಷ್ಟು ಸಾಧನೆ ಮಾಡಲು ಕಾರಣಕರ್ತರಾದ ಕಡಗದಾಳು ಪ್ರೌಢ ಶಾಲೆಯ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಗುರಿಯನ್ನಿಟ್ಟುಕೊಳ್ಳಬೇಕು. ಆ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿ ಕೊಳ್ಳಬೇಕೆಂದರು.
ರೆಡ್ಕ್ರಾಸ್ ಸಂಸ್ಥೆಯ ಪ್ರಮುಖ ಹಾಗೂ ರೋಟರಿ ಸದಸ್ಯ ರವೀಂದ್ರ ರೈ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡುತ್ತಿದ್ದಾರೆ. ಇದಕ್ಕೆ ಶಿಕ್ಷಕರ ಪರಿಶ್ರಮವೇ ಪ್ರಮುಖ ಕಾರಣವಾಗಿದೆ ಎಂದರು.
ಸಮಾಜ ಸೇವಕ ಹಾಗೂ ದಾನಿಗಳಾದ ವಾಸುದೇವ್ ಮಾತನಾಡಿ, ಸರಕಾರಿ ಶಾಲೆಗಳು ಶಿಕ್ಷಕರ ಪರಿಶ್ರಮದಿಂದ ಉತ್ತಮ ಸಾಧನೆ ಮಾಡುತ್ತಿದೆ ಎಂದರು.
ವೃತ್ತ ನಿರೀಕ್ಷಕ ದಿವಾಕರ್ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯವೆಂದರು.
ಗ್ರಾ.ಪA ವತಿಯಿಂದ ಶಾಲೆಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಹೆಚ್.ಎಲ್. ದಿವಾಕರ್ ಮಾತನಾಡಿ, ಸಮಿತಿ ರೈ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡುತ್ತಿದ್ದಾರೆ. ಇದಕ್ಕೆ ಶಿಕ್ಷಕರ ಪರಿಶ್ರಮವೇ ಪ್ರಮುಖ ಕಾರಣವಾಗಿದೆ ಎಂದರು.
ಸಮಾಜ ಸೇವಕ ಹಾಗೂ ದಾನಿಗಳಾದ ವಾಸುದೇವ್ ಮಾತನಾಡಿ, ಸರಕಾರಿ ಶಾಲೆಗಳು ಶಿಕ್ಷಕರ ಪರಿಶ್ರಮದಿಂದ ಉತ್ತಮ ಸಾಧನೆ ಮಾಡುತ್ತಿದೆ ಎಂದರು.
ವೃತ್ತ ನಿರೀಕ್ಷಕ ದಿವಾಕರ್ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯವೆಂದರು.
ಗ್ರಾ.ಪA ವತಿಯಿಂದ ಶಾಲೆಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಹೆಚ್.ಎಲ್. ದಿವಾಕರ್ ಮಾತನಾಡಿ, ಸಮಿತಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು, ಕಳೆದ ೨೩ ವರ್ಷಗಳಿಂದ ದಲಿತ ವಿದ್ಯಾರ್ಥಿಗಳನ್ನು ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿದೆ ಎಂದರು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಂದೆ, ತಾಯಿಗಳ ಕನಸನ್ನು ನನಸು ಮಾಡಬೇಕೆಂದು ಕರೆ ನೀಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕಿ ಗಂಗಮ್ಮ ಅವರು, ದಲಿತ ಸಂಘರ್ಷ ಸಮಿತಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಜೊತೆಗೆ ಶಿಕ್ಷಕರನ್ನೂ ಸನ್ಮಾನಿಸು ತ್ತಿರುವುದು ಶ್ಲಾಘನೀಯವೆಂದರು.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ನಾಸರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ಹೆಚ್.ಎಲ್. ಕುಮಾರ್ ಉಪಸ್ಥಿತರಿದ್ದರು. ಎಸ್.ಡಿ. ಅನಿತಾ ಸ್ವಾಗತಿಸಿ, ಆರತಿ ನಿರೂಪಿಸಿದರು, ಶಿಕ್ಷಕಿ ಪಿ.ಎಸ್. ರೂಪ ವಂದಿಸಿದರು.