ಮಡಿಕೇರಿ, ಮಾ.೮ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ತಮ್ಮ ಕಾರ್ಯಯೋಜನೆಯಲ್ಲಿ ಕೊಡವ ಆಚಾರ-ವಿಚಾರ, ಪದ್ಧತಿ- ಪರಂಪರೆ, ಭಾ಼ಷೆ- ಸಾಹಿತ್ಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರುತ್ತಿದೆ. ಅದರಂತೆ ಕೊಡವ ಸಾಹಿತ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ ‘ಅನುವಾದ ಕಾರ್ಯಾಗಾರ’ ನಡೆಸಲು ತೀರ್ಮಾನಿಸಿದೆ. ಈ ಕಾರ್ಯಕ್ರಮದಲ್ಲಿ ೩ ತಾಲೂಕಿಗೆ ಸಂಬAಧಿಸಿದ ಆಯಾಯ ಕಾಲೇಜಿನ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ. ಭಾಗವಹಿಸುವ ವಿದ್ಯಾರ್ಥಿಗಳು, ಸಾರ್ವಜನಿಕರು ತಮ್ಮ ಸಂಪೂರ್ಣ ವಿವರವನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಕಚೇರಿಗೆ ತಾ. ೧೫ ರೊಳಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗೆ ೦೮೨೭೨-೨೨೯೦೭೪ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.