ಪೊನ್ನಂಪೇಟೆ, ಮಾ. ೮: ಉಡುಪಿಯ ಅಜ್ಜರಕಾಡು ಎಂಬ ಸ್ಥಳದಲ್ಲಿ ನಡೆದ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಕ್ರೀಡಾಕೂಟದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಜ್ಯೋತಿಕ ೨೦೦ ಮೀ. ಹಾಗೂ ೪೦೦ ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಅಲ್ಲದೆ ಮಂಗಳೂರು ವಿಶ್ವ ವಿದ್ಯಾನಿಲಯದ ಉತ್ತಮ ಮಹಿಳಾ ಕ್ರೀಡಾಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.