ಸೋಮವಾರಪೇಟೆ,ಮಾ.೯: ತಾಲೂಕಿನ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ದುಪ್ಪಟ್ಟು ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅಬಕಾರಿ ಇಲಾಖೆ ಇದಕ್ಕೆ ಕಡಿವಾಣ ಹಾಕಬೇಕೆಂದು ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಆಗ್ರಹ ಕೇಳಿಬಂತು.

ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷೆ ಪುಷ್ಪಾ ರಾಜೇಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಗ್ರಾಮೀಣ ಭಾಗದ ಹಲವಷ್ಟು ಅಂಗಡಿಗಳಲ್ಲಿ ದುಪ್ಪಟ್ಟು ಬೆಲೆಗೆ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಅಬಕಾರಿ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಉಪಾಧ್ಯಕ್ಷ ಅಭಿಮನ್ಯುಕುಮಾರ್ ಆಗ್ರಹಿಸಿದರು.

ಕೂಲಿ ಕಾರ್ಮಿಕರು ಹೆಚ್ಚಾಗಿರುವ ಕಾಲೋನಿಗಳ ಅಂಗಡಿಗಳಲ್ಲಿ ಹೆಚ್ಚಿನ ದರಕ್ಕೆ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಪ್ರತಿ ದಿನ ಸಾಲ ಮಾಡಿ ಮದ್ಯ ಸೇವಿಸುವ ಮಂದಿ ವಾರದ ಸಂಬಳವನ್ನು ಮದ್ಯದಂಗಡಿಗೆ ನೀಡುತ್ತಿದ್ದಾರೆ. ಅಂಗಡಿಯವರು ದುಪ್ಪಟ್ಟು ಹಣ ಪಡೆದು ಆರಾಮಾಗಿದ್ದಾರೆ ಎಂದು ಸಭೆಯ ಗಮನ ಸೆಳೆದರು.

ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಗ್ರಾಮಸ್ಥರ ಸಹಕಾರದಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಕೆಲವು ಕಡೆ ಧಾಳಿ ಸೋಮವಾರಪೇಟೆ,ಮಾ.೯: ತಾಲೂಕಿನ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ದುಪ್ಪಟ್ಟು ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಅಬಕಾರಿ ಇಲಾಖೆ ಇದಕ್ಕೆ ಕಡಿವಾಣ ಹಾಕಬೇಕೆಂದು ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಆಗ್ರಹ ಕೇಳಿಬಂತು.

ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷೆ ಪುಷ್ಪಾ ರಾಜೇಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಗ್ರಾಮೀಣ ಭಾಗದ ಹಲವಷ್ಟು ಅಂಗಡಿಗಳಲ್ಲಿ ದುಪ್ಪಟ್ಟು ಬೆಲೆಗೆ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಅಬಕಾರಿ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಉಪಾಧ್ಯಕ್ಷ ಅಭಿಮನ್ಯುಕುಮಾರ್ ಆಗ್ರಹಿಸಿದರು.

ಕೂಲಿ ಕಾರ್ಮಿಕರು ಹೆಚ್ಚಾಗಿರುವ ಕಾಲೋನಿಗಳ ಅಂಗಡಿಗಳಲ್ಲಿ ಹೆಚ್ಚಿನ ದರಕ್ಕೆ ಮದ್ಯದ ಪ್ಯಾಕೆಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಪ್ರತಿ ದಿನ ಸಾಲ ಮಾಡಿ ಮದ್ಯ ಸೇವಿಸುವ ಮಂದಿ ವಾರದ ಸಂಬಳವನ್ನು ಮದ್ಯದಂಗಡಿಗೆ ನೀಡುತ್ತಿದ್ದಾರೆ. ಅಂಗಡಿಯವರು ದುಪ್ಪಟ್ಟು ಹಣ ಪಡೆದು ಆರಾಮಾಗಿದ್ದಾರೆ ಎಂದು ಸಭೆಯ ಗಮನ ಸೆಳೆದರು.

ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಗ್ರಾಮಸ್ಥರ ಸಹಕಾರದಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಕೆಲವು ಕಡೆ ಧಾಳಿ ಶನಿವಾರಸಂತೆ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು ಯೋಜನೆಗೆ ೫೦ಲಕ್ಷ ರೂ. ವಿನಿಯೋಗಿಸಿದ್ದು, ಕುಡಿಯುವುದಕ್ಕೆ ೫ ಲೀಟರ್‌ನಷ್ಟು ನೀರು ಸಿಗುತ್ತಿಲ್ಲ ಎಂದು ಸದಸ್ಯ ಅನಂತ್‌ಕುಮಾರ್ ವ್ಯಂಗ್ಯವಾಡಿದರು.

ವೈಜ್ಞಾನಿಕ ಕಾಮಗಾರಿ ನಡೆಯದ ಹಿನ್ನೆಲೆ ಸರಕಾರದ ಹಣ ಪೋಲಾಗಿದೆ. ಕಳೆದ ಎರಡು ವರ್ಷಗಳಿಂದ ಘಟಕದಿಂದ ನೀರು ಸರಬರಾಜು ಆಗುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಇಂಜಿನಿಯರಿAಗ್ ವಿಭಾಗದ ಎಇಇ ವೀರೇಂದ್ರ ಹೇಳಿದರು.

ಜಿಲ್ಲಾ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳು ಜೂನ್ ಅಂತ್ಯದ ಒಳಗೆ ಪೂರ್ಣಗೊಳ್ಳಬೇಕು. ಸರಕಾರದ ಅನುದಾನ ವಾಪಾಸ್ಸಾದರೆ ಅಧಿಕಾರಿಗಳೇ ಹೊಣೆಯಾU Àಬೇಕಾಗುತ್ತದೆ ಎಂದು ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಎಚ್ಚರಿಸಿದರು.

ಕಾಡಾನೆಗಳ ಹಾವಳಿ, ಬೆಳೆನಷ್ಟದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು, ಬೆಳೆಹಾನಿ

(ಮೊದಲ ಪುಟದಿಂದ) ಪರಿಹಾರವನ್ನು ಸೂಕ್ತ ಸಮಯದಲ್ಲಿ ವಿತರಿಸಲಾಗುತ್ತಿದೆ. ಕೆಲ ಕಡೆ ಅರಣ್ಯದೊಳಗೆ ಕೆರೆಗಳನ್ನು ನಿರ್ಮಿಸಲಾಗಿದೆ. ಆನೆಕಂದಕಗಳ ದುರಸ್ತಿ ಮಾಡಲಾಗುತ್ತಿದೆ ಎಂದು ಶನಿವಾರಸಂತೆ, ಕುಶಾಲನಗರ, ಸೋಮವಾರಪೇಟೆ ವಲಯದ ಅರಣ್ಯಾಧಿಕಾರಿಗಳು ತಿಳಿಸಿದರು.

ಸರ್ಕಾರದ ವಿವಿಧ ಇಲಾಖೆಗೆ ದಾನಕೊಟ್ಟ ಜಾಗವನ್ನು ಇಲಾಖೆಯ ಹೆಸರಿಗೆ ವರ್ಗಾಯಿಸಿಕೊಳ್ಳಲು ಕ್ರಮಕೈಗೊಳ್ಳಬೇಕು. ಕಳೆದ ನಾಲ್ಕೂವರೆ ವರ್ಷಗಳ ಹಿಂದೆಯೇ ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಆಗಿತ್ತು. ಆದರೆ ಇದುವರೆಗೆ ಇಲಾಖಾಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಸದಸ್ಯರಾದ ಬಿ.ಬಿ.ಸತೀಶ್, ಬಲ್ಲಾರಂಡ ಮಣಿ ಉತ್ತಪ್ಪ ಬೇಸರ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ೧೧ ಶಾಲೆಗಳು ದಾನಕೊಟ್ಟ ಜಾಗದಲ್ಲಿವೆ. ಹಕ್ಕುಪತ್ರಗಳನ್ನು ಮಾಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ದಾನಿಗಳ ಮಕ್ಕಳನ್ನು ಮನವೊಲಿಸಿ ಹಕ್ಕುಪತ್ರ ಮಾಡಿಸಿಕೊಳ್ಳಲಾಗುವುದು. ಈಗಾಗಲೇ ೫ ಶಾಲೆಗಳ ದಾಖಲಾತಿ ಕಾರ್ಯ ಪ್ರಗತಿಯಲ್ಲಿದೆ ಎಂದು ಬಿಇಒ ಪಾಂಡು ಸಭೆಗೆ ತಿಳಿಸಿದರು.

ತಾಲೂಕಿನ ೧೬ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಿಲ್ಲ. ಆದರೆ ಗುತ್ತಿಗೆದಾರರಿಗೆ ಬಿಲ್ ನೀಡಲಾಗಿದೆ ಎಂದು ಸದಸ್ಯರಾದ ತಂಗಮ್ಮ, ಸಬಿತಾ ಚನ್ನಕೇಶವ, ಸತೀಶ್ ಆರೋಪಿಸಿದರು. ಮುಂದಿನ ಸೋಮವಾರದೊಳಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ ಎಂದು ಶಿಶುಅಭಿವೃದ್ಧಿ ಯೋಜನಾಧಿಕಾರಿ ಅಣ್ಣಯ್ಯ ಹೇಳಿದರು.

ಸಭೆಯಲ್ಲಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಚAಗಪ್ಪ, ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ತಾ.ಪಂ. ಸದಸ್ಯರಾದ ಒ.ಎಸ್.ಲೀಲಾವತಿ, ಡಿ.ಎಸ್. ಗಣೇಶ್, ಎಚ್.ಡಿ. ಮಣಿ, ಬಿ.ಈ. ಸವಿತಾ, ಧರ್ಮಪ್ಪ ಅವರುಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.