ಸೋಮವಾರಪೇಟೆ, ಮಾ. ೮: ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿಸಲು ಇಲ್ಲಿನ ಪ.ಪಂ. ವತಿಯಿಂದ ಜಾಗೃತಿ ಕಾರ್ಯಕ್ರಮ ನಡೆಯಿತು.
ಪಂಚಾಯಿತಿ ಆಡಳಿತ ಮಂಡಳಿ ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿಗಳು ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕರು ಪ್ಲಾಸ್ಟಿಕ್ ಬಳಸದಂತೆ ಮೈಕ್ ಮೂಲಕ ಜಾಗೃತಿ ಮೂಡಿಸಿದರು. ಈ ಸಂದರ್ಭ ಪ.ಪಂ. ಅಧ್ಯಕ್ಷೆ ನಳಿನಿ ಗಣೇಶ್ ಸೇರಿದಂತೆ ಸದಸ್ಯರುಗಳು, ಮುಖ್ಯಾಧಿಕಾರಿ ನಾಚಪ್ಪ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.