ಸೋಮವಾರಪೇಟೆ, ಮಾ. ೮: ಸಮೀಪದ ಯಡೂರು ಗ್ರಾಮದ ವೈಸಿಸಿ ಕ್ರಿಕೆಟ್ ಕ್ಲಬ್ ವತಿಯಿಂದ ತಾ. ೧೩ ಮತ್ತು ೧೪ರಂದು ಬಿಟಿಸಿಜಿ ಕಾಲೇಜು ಮೈದಾನದಲ್ಲಿ ೨೧ನೇ ವರ್ಷದ ಜಿಲ್ಲಾ ಮಟ್ಟದ ಮುಕ್ತ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಸಂದೇಶ್ ತಿಳಿಸಿದ್ದಾರೆ.

ಪ್ರಥಮ ಬಹುಮಾನ ೧೨ ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ ೭ ಸಾವಿರ ನಗದು ಹಾಗೂ ಟ್ರೋಫಿಯೊಂದಿಗೆ ವೈಯುಕ್ತಿಕ ವಿಭಾಗದಲ್ಲೂ ಪ್ರಶಸ್ತಿ ನೀಡಲಾಗುವುದು. ತಾ. ೧೩ ರಂದು ಪೂರ್ವಾಹ್ನ ೧೦ ಗಂಟೆಗೆ ಪಂದ್ಯಾಟಕ್ಕೆ ಚಾಲನೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ: ೯೬೩೨೨೯೭೨೨೭, ೯೪೮೨೨೩೨೫೬೩ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.