ಸೋಮವಾರಪೇಟೆ, ಮಾ. ೯: ಪ್ರಾಕೃತಿಕ ವಿಕೋಪ, ಅಕಾಲಿಕ ಮಳೆಯಿಂದ ಜಿಲ್ಲೆಯ ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಇವರುಗಳ ೧೦ ಹೆಚ್.ಪಿ. ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸದಿದ್ದರೆ ಜಿಲ್ಲೆಯ ಕಾಫಿ ಬೆಳೆಗಾರರು ಹಾಗೂ ವಿವಿಧ ಸಂಘ-ಸAಸ್ಥೆಗಳ ಸಹಕಾರ ಪಡೆದು ಮುಂದಿನ ಚುನಾವಣೆಗಳನ್ನು ಬಹಿಷ್ಕರಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರೈತ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಲಿಂಗೇರಿ ರಾಜೇಶ್ ಎಚ್ಚರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಈ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಣ್ಣ ಅವರು ಭರವಸೆ ನೀಡಿದ್ದರು. ಆದರೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾಫಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಕಷ್ಟದಲ್ಲಿರುವ ರೈತರು ಹಾಗೂ ಬೆಳೆಗಾರರ ನೋವನ್ನು ಆಡಳಿತ ನಡೆಸುವ ಸರ್ಕಾರಗಳು ಅರ್ಥಮಾಡಿಕೊಳ್ಳುತ್ತಿಲ್ಲ. ಹೀಗೆ ಶೋಷಣೆ ಮುಂದುವರಿದರೆ ಕೊಡಗು ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಮುಂದಡಿಯಿಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯದ ಭತ್ತ, ಅಡಿಕೆ, ತೆಂಗು, ರಬ್ಬರ್ ಬೆಳೆಗಾರರಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಕಾಫಿ ಬೆಳೆಗಾರರಿಗೆ ಮಲತಾಯಿ ಧೋರಣೆ ಸರಿಯಲ್ಲ. ಕಾಫಿ ಬೆಳೆಗಾರರು ಹೋರಾಟದ ಮೂಲಕ ನ್ಯಾಯ ಪಡೆದುಕೊಳ್ಳಬೇಕಾಗಿದೆ ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಎಂ. ದಿನೇಶ್ ಹೇಳಿದರು.

ಜಿಲ್ಲೆಯ ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಾದರೂ ಶಾಸಕರು, ಸಂಸದರು ಕಾಫಿ ಬೆಳೆಗಾರರಿಗೆ ಸೌಲಭ್ಯ ಬೆಳೆಗಾರರ ನೋವನ್ನು ಆಡಳಿತ ನಡೆಸುವ ಸರ್ಕಾರಗಳು ಅರ್ಥಮಾಡಿಕೊಳ್ಳುತ್ತಿಲ್ಲ. ಹೀಗೆ ಶೋಷಣೆ ಮುಂದುವರಿದರೆ ಕೊಡಗು ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಮುಂದಡಿಯಿಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯದ ಭತ್ತ, ಅಡಿಕೆ, ತೆಂಗು, ರಬ್ಬರ್ ಬೆಳೆಗಾರರಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಕಾಫಿ ಬೆಳೆಗಾರರಿಗೆ ಮಲತಾಯಿ ಧೋರಣೆ ಸರಿಯಲ್ಲ. ಕಾಫಿ ಬೆಳೆಗಾರರು ಹೋರಾಟದ ಮೂಲಕ ನ್ಯಾಯ ಪಡೆದುಕೊಳ್ಳಬೇಕಾಗಿದೆ ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಎಂ. ದಿನೇಶ್ ಹೇಳಿದರು.

ಜಿಲ್ಲೆಯ ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಾದರೂ ಶಾಸಕರು, ಸಂಸದರು ಕಾಫಿ ಬೆಳೆಗಾರರಿಗೆ ಸೌಲಭ್ಯ ತಾಲೂಕು ಅಧ್ಯಕ್ಷ ಎಂ.ಸಿ. ಮುದ್ದಪ್ಪ ಒತ್ತಾಯಿಸಿದರು.

ಕಳೆದ ಆರೇಳು ವರ್ಷಗಳಿಂದ ಜಿಲ್ಲೆಯ ಕಾಫಿ ಬೆಳೆಗಾರರು ಹಾಗೂ ಕೃಷಿಕರು ಪ್ರತಿವರ್ಷ ಬೆಳೆಹಾನಿಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಜಿಲ್ಲಾಡಳಿತ ಪ್ರತಿವರ್ಷ ಹಸಿಸುಳ್ಳು ಹೇಳುತ್ತಾ ಕಾಲ ಕಳೆಯುತ್ತಿದೆ ಎಂದು ರೈತ ಸಂಘದ ಉಪಾಧ್ಯಕ್ಷ ಎ.ಆರ್.ಕುಶಾಲಪ್ಪ ದೂರಿದರು.

ಅಂತರರಾಷ್ಟಿçÃಯ ಮಾರುಕಟ್ಟೆ ಯಲ್ಲಿ ಕಾಫಿ ದರ ಹೆಚ್ಚಾದರೂ, ಪಟ್ಟಣದಲ್ಲಿ ಕಾಫಿ ಬೆಲೆ ಕುಸಿಯುತ್ತಿದೆ. ಪ್ರಸಕ್ತ ಅರೇಬಿಕಾ ಪಾರ್ಚ್ಮೆಂಟ್‌ಗೆ ೧೧,೫೦೦ ರೂ.ಬೆಲೆ ಸಿಗಬೇಕು. ಆದರೆ ಸ್ಥಳೀಯ ಖರೀದಿದಾರರು ೯೮೦೦ರೂ. ಬೆಲೆ ನಿಗದಿ ಮಾಡಿಕೊಂಡಿದ್ದಾರೆ. ಪಟ್ಟಣದಲ್ಲಿರುವ ಕೆಲ ಕಾಫಿ ಖರೀದಿದಾರರು ಬೆಳೆಗಾರರಿಗೆ ಅನ್ಯಾಯ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಬೆಳೆಗಾರರ ಕಷ್ಟವನ್ನು ಕೇಳುವವರು ಇಲ್ಲದಂತಾಗಿದೆ. ಈ ಬಗ್ಗೆ ಅಧಿಕಾರಿಗಳು ಮತ್ತು ಶಾಸಕರು ಮಧ್ಯಪ್ರವೇಶಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ರೈತ ಸಂಘದ ತಾಲೂಕು ಸಂಚಾಲಕ ಎಸ್.ಪಿ. ರಾಜಪ್ಪ ಆಗ್ರಹಿಸಿದರು.