ಮಡಿಕೇರಿ, ಮಾ.೮: ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ವತಿಯಿಂದ ಏರ್ಪಡಿಸಿದ್ದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಪಂಚಾಯ್ತಿಯಿAದ ಜಿಲ್ಲಾ ಪಂಚಾಯ್ತಿಯ ಉಪ ಕಾರ್ಯದರ್ಶಿಯಾಗಿ ಮುಂಬಡ್ತಿ ಹೊಂದಿರುವ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿ ಪಿ.ಅವರನ್ನು ಶಿಕ್ಷಣ ಇಲಾಖೆ ಹಾಗೂ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು.

ಲಕ್ಷಿö್ಮ ಅವರು ಕೂಡಿಗೆ ಡಯಟ್‌ನಲ್ಲಿ ಡಿ.ಎಡ್. ಪ್ರಶಿಕ್ಷಣ ತರಬೇತಿ ಪಡೆಯುವ ಸಂದರ್ಭದಲ್ಲಿ ಉಪನ್ಯಾಸಕರಾಗಿದ್ದ ಇಂದಿನ ಡಿಡಿಪಿಐ ಪಿ.ಎಸ್.ಮಚ್ಚಾಡೋ, ಲಕ್ಷಿö್ಮ ಅವರನ್ನು ಸನ್ಮಾನಿಸಿ ವಿಜ್ಞಾನ ಪುಸ್ತಕ ನೀಡಿದರು. ಜಿ.ಪಂ.ಸಿಇಓ ಭನ್ವರ್ ಸಿಂಗ್ ಮೀನಾ, ಲಕ್ಷಿö್ಮ ಅವರನ್ನು ಅಭಿನಂದಿಸಿದರು.

ಶಿಕ್ಷಣಾಧಿಕಾರಿಗಳಾದ ಕೆ.ಕಾಂತರಾಜು, ಎಂ.ಕೃಷ್ಣಪ್ಪ, ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್, ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ, ಆಯುಕ್ತ ಜಿಮ್ಮಿ ಸಿಕ್ವೇರಾ, ನೋಡಲ್ ಅಧಿಕಾರಿ ಎಸ್.ಟಿ.ವೆಂಕಟೇಶ್, ರಾಜ್ಯ ವಿಜ್ಞಾನ ಪರಿಷತ್ತಿನ ಪ್ರಮುಖರಾದ ಟಿ.ಜಿ.ಪ್ರೇಮಕುಮಾರ್, ಸಿ.ಎಸ್.ಸುರೇಶ್, ಜಿ.ಶ್ರೀಹರ್ಷ, ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡಿ.ಎಂ.ರೇವತಿ ಇದ್ದರು.