ಮಡಿಕೇರಿ, ಮಾ. ೧೦: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಡಿಕೇರಿಯ ಜನೌಷಧಿ ಕೇಂದ್ರ ಹಾಗೂ ಮೆಡಿಕಲ್ ಕಾಲೇಜು ಮಡಿಕೇರಿ ಇವರ ಸಹಯೋಗದೊಂದಿಗೆ ಜನೌಷಧಿ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಸ್ತಿçà ರೋಗ ತಜ್ಞೆ ಡಾ. ಸುಮನ್ ಅವರು ಋತುಚಕ್ರದ ಸಮಯದಲ್ಲಿ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದರ ಕುರಿತು ಮಾರ್ಗದರ್ಶನ ನೀಡಿದರು. ಮತ್ತೋರ್ವ ಅತಿಥಿಗಳಾಗಿ ಆಗಮಿಸಿದ್ದ ಮಹೇಶ್ಕುಮಾರ್ ಕೆ.ಕೆ., ಯೋಗ ಶಿಕ್ಷಕರು ಭಾರತೀಯ ವಿದ್ಯಾಭವನ ಮಡಿಕೇರಿ ಇವರು ಪ್ರಧಾನ ಮಂತ್ರಿ ಜನೌಷಧಿ ಕೇಂದ್ರದ ಸೌಲಭ್ಯಗಳನ್ನು ಉಪಯೋಗಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮಡಿಕೇರಿಯ ಜನೌಷಧಿ ಕೇಂದ್ರದ ಮಾಲೀಕ ಜೀಜಾ, ಮೆಡಿಕಲ್ ಕಾಲೇಜಿನ ವೈದ್ಯ ಡಾ. ಮನಪ್ರೀತಾ ಮತ್ತು ಡಾ. ಕಾವ್ಯ, ಸರಕಾರಿ ಪದವಿಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಧನಂಜಯ ಮತ್ತು ವಿದ್ಯಾರ್ಥಿ ಪರಿಷತ್ತಿನ ವಿರೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಿ.ಜೆ. ಜವರಪ್ಪ ವಹಿಸಿದ್ದರು. ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಾ. ಕನ್ನಿಕಾ ನಿರೂಪಿಸಿ, ಜೆಸ್ನಾ ಮತ್ತು ತಂಡ ಪ್ರಾರ್ಥಿಸಿದರು. ಧನಂಜಯ್ ಸ್ವಾಗತಿಸಿದರು. ಶಾಲಿನಿ ವಂದಿಸಿದರು.