ಕುಶಾಲನಗರ, ಮಾ. ೧೦: ಜೆಸಿಐ ಕುಶಾಲನಗರ ಕಾವೇರಿ ಘಟಕದ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಜೆಸಿಐ ಉಪಾಧ್ಯಕ್ಷೆ ಕವಿತಾ ಪ್ರವೀಣ್ ಅಧ್ಯಕ್ಷತೆಯಲ್ಲಿ ವಾಸವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ವಿ.ಪಿ. ನಾಗೇಶ್ ಉದ್ಘಾಟಿಸಿದರು.
ಅತಿಥಿಗಳಾಗಿ ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರದ ಆಡಳಿತ ಅಧಿಕಾರಿ ಡಾ. ಕರುಂಬಯ್ಯ, ಜೆಸಿಐ ಕುಶಾಲನಗರ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್, ವಲಯ ನಿರ್ದೇಶಕ ಕೆ. ಪ್ರವೀಣ್, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.