ಮಡಿಕೇರಿ, ಮಾ.೧೦: ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ವಾರ್ಷಿಕ ಕ್ರೀಡಾ ಕೂಟವು ತಾ. ೧೧ ರಿಂದ (ಇಂದಿನಿAದ) ೧೩ ರವರೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ೯ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಒಲಿಂಪಿಕ್ಸ್ ಕ್ರೀಡಾಪಟು ಬೊಳ್ಳಂಡ ಪ್ರಮೀಳಾ ಅಯ್ಯಪ್ಪ ಅವರು ಉದ್ಘಾಟಿಸಲಿದ್ದಾರೆ. ತಾ. ೧೩ ರಂದು ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ಪ್ರವೀಣ್ ಪವಾರ್ ಮಧುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಇತರರು ಪಾಲ್ಗೊಳ್ಳಲಿದ್ದಾರೆ.