ವೀರಾಜಪೇಟೆ, ಮಾ. ೧೦: ಸೆಂಟ್ ಅನ್ಸ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ (ಎಂ.ಕಾA) ಹಾಗೂ ಗ್ರಂಥಾಲಯ ಉದ್ಘಾಟನಾ ಸಮಾರಂಭ ಹಾಗೂ ಆಶೀರ್ವಚನ ಕಾರ್ಯಕ್ರಮ ತಾ. ೧೨ ರಂದು ಬೆಳಿಗ್ಗೆ ೯.೩೦ ಗಂಟೆಗೆ ನಡೆಯಲಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಮದಲೈಮುತ್ತು ಅವರು, ವೀರಾಜಪೇಟೆಯ ಸಂತ ಅನ್ನಮ್ಮ ದೇವಾಲಯ ೨೨೫ ವರ್ಷಗಳ ಸಂಭ್ರಮದಲ್ಲಿದ್ದು, ಇದರ ಜ್ಞಾಪಕಾರ್ಥವಾಗಿ ಸ್ನಾತಕೋತ್ತರ ಪದವಿ ಹಾಗೂ ಗ್ರಂಥಾಲಯದ ಕಟ್ಟಡವನ್ನು ಕಟ್ಟಲಾಗಿದೆ. ಮೈಸೂರು ಧರ್ಮಾಧ್ಯಕ್ಷ ಡಾ. ಕೆ.ಎ. ವಿಲಿಯಂ ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅರಮೇರಿ ಕಳಂಚೇರಿ ಮಠದ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ವೀರಾಜಪೇಟೆ ಜಾಮಿಯಾ ಮಸೀದಿಯ ಅಧ್ಯಕ್ಷ ನಿಯಾಜ್ ಅಹಮದ್, ಮತ್ತಿತರ ಗಣ್ಯರು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.