ಮಡಿಕೇರಿ, ಮಾ. ೧೨: ಮಡಿಕೇರಿ ತಾಲೂಕಿನ ಭಾಗಮಂಡಲ, ಸಂಪಾಜೆ, ನಾಪೋಕ್ಲು ಹೋಬಳಿ ವ್ಯಾಪ್ತಿಗೆ ಸಂಬAಧಿಸಿದAತೆ ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ನಾಗೇಶ್ ಕುಂದಲ್ಪಾಡಿ ಅವರು ಅಕ್ರಮ-ಸಕ್ರಮ ಸಮಿತಿಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಆ ನಿಟ್ಟಿನಲ್ಲಿ ಅನುಮೋದನೆಯಾದ ಅರ್ಜಿಗಳನ್ನು ತ್ವರಿತವಾಗಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಸೂಚಿಸಿದರು.
ಫಾರಂ ನಂ. ೫೦, ೫೩ ಮತ್ತು ೫೭ ರಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸಮಿತಿಗೆ ಇಡಬೇಕು. ಸಮಿತಿಯಲ್ಲಿ ಇತ್ಯರ್ಥಕ್ಕೆ ಕ್ರಮವಹಿಸಬೇಕು. ಕೆಲವು ಕಡೆ ಜಂಟಿ ಸರ್ವೇ ಕಾರ್ಯ ನಡೆಯಬೇಕು ಎಂದು ಅವರು ಹೇಳಿದರು.
ಸಮಿತಿ ಸದಸ್ಯರಾದ ಸುಬ್ರಮಣ್ಯ ಉಪಾಧ್ಯಾಯ ಅವರು ಮಾತನಾಡಿ ಅಕ್ರಮ ಸಕ್ರಮಕ್ಕೆ ಸಲ್ಲಿಕೆಯಾಗಿರುವ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿಗೆ ಕ್ರಮವಹಿಸಬೇಕು ಎಂದರು.
ಸಮಿತಿ ಸದಸ್ಯರಾದ ಮಿಟ್ಟು ಅವರು ಯವಕಪಾಡಿ-ಚೇಲಾವರ ಭಾಗದಲ್ಲಿ ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಅಗತ್ಯ ಭೂಮಿ ಕಲ್ಪಿಸಲು ಕ್ರಮವಹಿಸಬೇಕಿದೆ ಎಂದರು.
ತಹಶೀಲ್ದಾರ್ ಮಹೇಶ್ ಅವರು ಅಕ್ರಮ-ಸಕ್ರಮ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸಮಿತಿ ಮುಂದೆ ಕಾಲ ಕಾಲಕ್ಕೆ ಇಡಲಾಗುತ್ತದೆ ಎಂದು ಅವರು ತಿಳಿಸಿದರು. ಮತ್ತೊಬ್ಬ ಸಮಿತಿ ಸದಸ್ಯರಾದ ಕವಿತಾ ಪ್ರಭಾಕರ್ ಅವರು ಮಾತನಾಡಿದರು. ಕಂದಾಯ ನಿರೀಕ್ಷಕರು ಇತರರು ಇದ್ದರು.