ಮಡಿಕೇರಿ, ಮಾ. ೧೩: ಕೇರಳ ರಾಜ್ಯದಲ್ಲಿ ಸದ್ಯದಲ್ಲಿಯೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕೊಡಗು ಜಿಲ್ಲೆಯ ನಾಲ್ವರು ಬಿಜೆಪಿ ಪ್ರಮುಖರು ಪಕ್ಷದ ಪರ ಉಸ್ತುವಾರಿಗಳಾಗಿ ನೇಮಕಗೊಂಡಿದ್ದಾರೆ.

ಅಲಾಪುಜ್ ಜಿಲ್ಲೆಯ ಚೆಂಗನ್ನೂರು ವಿಧಾನಸಭಾ ಕ್ಷೇತ್ರಕ್ಕೆ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ಪಿ.ಯು. ರಾಬಿನ್ ದೇವಯ್ಯ, ಮಾವೇಲಿಕರ ಕ್ಷೇತ್ರಕ್ಕೆ ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಹರಿಪಾಡ ಕ್ಷೇತ್ರಕ್ಕೆ ಎಂ.ಪಿ. ಸುನಿಲ್ ಸುಬ್ರಮಣಿ ಹಾಗೂ ಕೊಡ್ಯಮ್ ಜಿಲ್ಲೆಯ ಕಾಂಜೀರಪಳ್ಳಿ ಕ್ಷೇತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಹಾಗೂ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಅವರುಗಳನ್ನು ಉಸ್ತುವಾರಿಗಳನ್ನಾಗಿ ಕರ್ನಾಟಕ ರಾಜ್ಯ ಬಿಜೆಪಿ ಸಮಿತಿ ನಿಯೋಜಿಸಿದೆ ಎಂದು ಪಕ್ಷದ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಕನ್ನಿಗಂಡ ಬಿ. ಪೊನ್ನಪ್ಪ ತಿಳಿಸಿದ್ದಾರೆ.