ಕೂಡಿಗೆ ಮಾ ೧೨ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಸರಗೋಡು ಬೀದಿಯ ಹರೀಶ್ (೪೦) ಎಂಬವರು ತನ್ನ ಬೈಕ್ನಲ್ಲಿ ಹೆಬ್ಬಾಲೆಯ ಬಸ್ ನಿಲ್ದಾಣದ ಸರ್ಕಲ್ ಬಳಿ ಬರುತ್ತಿದ್ದಾಗ ಮಹಿಳೆಯೊಬ್ಬರು ಅಡ್ಡ ಬಂದಾಗ ಅವರನ್ನು ತಪ್ಪಿಸಲು ಹೋಗಿ ರಸ್ತೆ ಬದಿಗೆ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟ್ಟಾದ ಪರಿಣಾಮ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಯಾಗದೆ ಹರೀಶ್ ಮೃತಪಟ್ಟಿರುತ್ತಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.