ನಾಪೋಕ್ಲು, ಮಾ. ೧೨: ಸ್ಥಳೀಯ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗಾಗಿ ನಿರ್ಮಿಸಲಾಗುತ್ತಿರುವ ನೂತನ ಶೌಚಾಲಯದ ಕಾಮಗಾರಿಯು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹಮ್ಮದ್ ಖುರೇಶಿ ಅವರ ಮೇಲುಸ್ತುವಾರಿಯಲ್ಲಿ ನಡೆಯುತ್ತಿದೆ. ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡ ಶೋಭಾ ಮೋಹನ್ ಸ್ಥಳಕ್ಕೆ ಆಗಮಿಸಿ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೇಟಿರ ಅರುಣ ಬೇಬ, ಹೇಮಾ ಅರುಣ ಬೇಬ, ಕೋಟೇರ ನೀಲಮ್ಮ ಮತ್ತಿತರರು ಇದ್ದರು.