ಸುಂಟಿಕೊಪ್ಪ, ಮಾ. ೧೨: ಶಾಂತಗಿರಿಯಲ್ಲಿ ಸುಂಟಿಕೊಪ್ಪ ಹೋಬಳಿಯ ಹೈಟೆಕ್ ಮಾರುಕಟ್ಟೆ ವಾಣಿಜ್ಯ ಸಂಕೀರ್ಣ ಉದ್ಯಾನವನ್ನು ರೂ. ೧ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.
ಭೂಮಿಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಸಂಸದ ಪ್ರತಾಪ್ ಸಿಂಹ, ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ, ಗ್ರಾ.ಪಂ. ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ ಹಾಗೂ ಪಂಚಾಯಿತಿ ಸದಸ್ಯರುಗಳ ಉಪಸ್ಥಿತಿಯಲ್ಲಿ ಮಾತನಾಡಿದ ಶಾಸಕರು, ಬಹಳ ವರ್ಷಗಳ ಬೇಡಿಕೆಯಾದ ಮಾರುಕಟ್ಟೆಯನ್ನು ಸುಸಜ್ಜಿತವಾಗಿ ನಿರ್ಮಿಸಲಾಗುವುದು. ಗುಣಮಟ್ಟದ ಕಾಮಗಾರಿಯನ್ನು ಅಭಿಯಂತರರು ಕಾಯ್ದುಕೊಳ್ಳಬೇಕು ಎಂದು ಹೇಳಿದರು. ಸುಂಟಿಕೊಪ್ಪ ಪಂಚಾಯಿತಿಯ ಗುಡ್ಡಪ್ಪ ರೈ ಬಡಾವಣೆಯ ರಸ್ತೆಗೆ ಶಾಸಕ ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು. ರೂ. ೧೦ ಲಕ್ಷ ವೆಚ್ಚದಲ್ಲಿ ಈ ರಸ್ತೆ ಕಾಮಗಾರಿ ನಡೆಯಲಿದೆ ಎಂದು ಅವರು ತಿಳಿಸಿದರು.