ಸುಂಟಿಕೊಪ್ಪ, ಮಾ. ೧೨: ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಕೆ.ವಿ. ರಾಜೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಭೇಟಿ ನೀಡಿ ಶಾಲೆಯ ಕ್ರೀಡಾ ಕೊಠಡಿಯನ್ನು ವೀಕ್ಷಿಸಿ ದೈಹಿಕ ಶಿಕ್ಷಕರನ್ನು ಅಭಿನಂದಿಸಿದರು.

ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯು ಕ್ರೀಡಾ ಕ್ಷೇತ್ರದಲ್ಲಿ ಉತ್ತಮವಾಗಿ ಸಾಧಿಸಿದ್ದು, ಮೈಸೂರು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಕೆ.ವಿ. ರಾಜೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪಾಂಡು ಅವರು ಭೇಟಿ ನೀಡಿ ಶಾಲೆಯಲ್ಲಿ ಕ್ರೀಡಾಕೂಟದಲ್ಲಿ ಶಾಲೆಯ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ರೀಡಾ ಕೊಠಡಿಯನ್ನು ವೀಕ್ಷಿಸಿ ಕ್ರೀಡೆ ಹಾಗೂ ದೈಹಿಕ ಶಿಕ್ಷಕ ಪಿ.ಇ. ನಂದ ಅವರ ಕಾರ್ಯವನ್ನು ಅಭಿನಂದಿಸಿದರು.

ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಪಾರ್ಥ, ದೈಹಿಕ ಶಿಕ್ಷಣ ಶಿಕ್ಷಕ ಪಿ.ಇ. ನಂದ ಮತ್ತಿತರರು ಇದ್ದರು.