ವೀರಾಜಪೇಟೆ, ಮಾ. ೧೨ : ವಸತಿ ಶಾಲೆಯಲ್ಲಿ ಗಿರಿಜನ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಿದೆ. ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ವತಿಯಿಂದ ವೀರಾಜಪೇಟೆ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ೪ ಕೋಟಿ ೨೩ ಲಕ್ಷ ರೂ. ಗಳ ವೆಚ್ಚದ ವಸತಿ ಕಾಲೇಜು ಭೂಮಿಪೂಜೆ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ಶಾಸಕರು. ಯಾವುದೇವಿದ್ಯಾರ್ಥಿಗಳು ಮೂಲಭೂತ ಸೌಲಭ್ಯ ಮತ್ತು ಶಿಕ್ಷಣದಿಂದ ವಂಚಿತರಾಗ ಬಾರದು ವಿಶೇಷವಾಗಿ ಗಿರಿಜನ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಹುಟ್ಟಿನಿಂದ ಪ್ರತಿಭಾನ್ವಿತರಾಗಿದ್ದು ಮಾಹಿತಿಗಳ ಕೊರತೆಯಿಂದ ಹಿಂದು ಳಿದಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರವು ರಾಜ್ಯದ ೧೨ ಸ್ಥಳಗಳಲ್ಲಿ ವಸತಿ ಶಾಲೆಯನ್ನು ಆರಂಭಿಸಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಶಿ ಸುಬ್ರಮಣಿ ಅವರು ಬುಡಕಟ್ಟು ಜನಾಂಗಕ್ಕೆ ಮಾಹಿತಿ ತಂತ್ರಜ್ಞಾನದ ಬಗ್ಗೆ ಅರಿವು ಕಡಿಮೆಯಿರುವುದರಿಂದ ಇಲಾಖಾ ಅಧಿಕಾರಿಗಳು ಗ್ರಾಮ ಮಟ್ಟದ ಶಾಲೆಗೆ ತೆರಳಿ ವಿದ್ಯಾರ್ಥಿಗಳ ಮಾಹಿತಿಗಳನ್ನು ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯ ಮತ್ತು ಶಿಕ್ಷಣದಿಂದ ವಂಚಿತರಾಗ ಬಾರದು ವಿಶೇಷವಾಗಿ ಗಿರಿಜನ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಹುಟ್ಟಿನಿಂದ ಪ್ರತಿಭಾನ್ವಿತರಾಗಿದ್ದು ಮಾಹಿತಿಗಳ ಕೊರತೆಯಿಂದ ಹಿಂದು ಳಿದಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರವು ರಾಜ್ಯದ ೧೨ ಸ್ಥಳಗಳಲ್ಲಿ ವಸತಿ ಶಾಲೆಯನ್ನು ಆರಂಭಿಸಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಶಿ ಸುಬ್ರಮಣಿ ಅವರು ಬುಡಕಟ್ಟು ಜನಾಂಗಕ್ಕೆ ಮಾಹಿತಿ ತಂತ್ರಜ್ಞಾನದ ಬಗ್ಗೆ ಅರಿವು ಕಡಿಮೆಯಿರುವುದರಿಂದ ಇಲಾಖಾ ಅಧಿಕಾರಿಗಳು ಗ್ರಾಮ ಮಟ್ಟದ ಶಾಲೆಗೆ ತೆರಳಿ ವಿದ್ಯಾರ್ಥಿಗಳ ಮಾಹಿತಿಗಳನ್ನು ಗೊಳಿಸಿ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಾಗಿದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನವಾಗಿ ಪರಿಣಮಿಸಿದೆ.ಎಂದು ಹೇಳಿದರು.
ಸಮಾರಂಭದಲ್ಲಿ ಕೋವಿಡ್ನಿಂದ ಮರಣಹೊಂದಿದ ವಿದ್ಯಾರ್ಥಿ ಚಿನ್ಮಯಿ ಪೋಷಕರಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರ ವತಿಯಿಂದ ೨.೫೦ ಲಕ್ಷ ರೂ. ಗಳ ಪರಿಹಾರ ಚೆಕ್ ವಿತರಿಸಲಾಯಿತು. ಎಸ್.ಎಸ್.ಎಲ್.ಸಿ.ಯಲ್ಲಿ ೧೦೦ ರಷ್ಟು ಫಲಿತಾಂಶಕ್ಕೆ ಕಾರಣಕರ್ತರಾದ ವಸತಿ ಶಾಲೆಯ ಪ್ರಾಂಶುಪಾಲ ಯೋಗನರಸಿಂಹ ಸ್ವಾಮಿ ಅವರಿಗೆ ಶಾಸಕರು ಪೇಟ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿದರು.
ಬಿಟ್ಟಂಗಾಲ ಗ್ರಾಮ ಪಂ.ಯ ಅಧ್ಯಕ್ಷೆ ರಮ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ. ಗಣೇಶ್, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಪಟ್ರಪಂಡ ರಘು ಸೋಮಯ್ಯ, ಅರ್ಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎನ್. ಉಪೇಂದ್ರ, ಸಮಗ್ರ ಗಿರಿಜನ ಸಮನ್ವಯ ಇಲಾಖೆಯ ಅಧಿಕಾರಿ ಶಶಿಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ರಾಜು ಸೋಮಯ್ಯ ಮತ್ತು ಮಾಚಮ್ಮ ಅವರುಗಳು ಉಪಸ್ಥಿತರಿದ್ದರು.