*ಸಿದ್ದಾಪುರ, ಮಾ. ೧೨ : ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ. ವ್ಯಾಪ್ತಿಯ ಅಭ್ಯತ್ ಮಂಗಲ ಮತ್ತು ವಾಲ್ನೂರು ಗ್ರಾಮಕ್ಕೆ ಕುಡಿಯುವ ನೀರನ್ನು ಒದಗಿಸುವ ಜಲ್ ಜೀವನ್ ಮಿಷನ್ ಯೋಜನೆಗೆ ಚಾಲನೆ ನೀಡಲಾಗಿದೆ.

ತ್ಯಾಗತ್ತೂರು ಗ್ರಾಮದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ

ನೆರವೇರಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, ಕೇಂದ್ರ ಸರ್ಕಾರ ಪ್ರತಿ ಕುಟುಂಬಕ್ಕೂ ಶುದ್ಧ ಕುಡಿಯುವ ನೀರನ್ನು ನೀಡುವ ಸಲುವಾಗಿ ಜಲ್ ಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತಂದಿದೆ. ಇದನ್ನು ಪ್ರತಿ ಗ್ರಾಮದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಯೋಜನೆ ಕುರಿತು ಮಾತನಾಡಿದರು. ಜಿ.ಪಂ ಸದಸ್ಯೆ ಸುನಿತಾ ಮಂಜುನಾಥ್, ಗ್ರಾ.ಪಂ ಅಧ್ಯಕ್ಷೆ ಬಿ.ಎಸ್.ಅನಿತ, ಉಪಾಧ್ಯಕ್ಷೆ ಎಂ.ಎಸ್.ಸುಧಾ, ಸದಸ್ಯರುಗಳಾದ ಮನುಮಹೇಶ್, ಭಾಗ್ಯ, ವಿಶಾಲ, ಸತೀಶ್, ಪಿಡಿಓ ಅನಿಲ್ ಕುಮಾರ್, ಕಾರ್ಯದರ್ಶಿ ರವಿ ಮತ್ತಿತರರು ಹಾಜರಿದ್ದರು.