ಸುಂಟಿಕೊಪ್ಪ, ಮಾ. ೧೧: ಇಲ್ಲಿನ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ನೂತನ ಉಪಾಧ್ಯಕ್ಷ ಹಾಗೂ ಸದಸ್ಯರಿಂದ ಗ್ರಾಮ ವಾಸ್ತವ್ಯದ ಮೂಲಕ ಗ್ರಾಮದ ಜನರ ಸಮಸ್ಯೆ ಆಲಿಸಲಾಯಿತು.

ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಟಾಟಾ ಕಾಫಿ ತೋಟದ ಲೈನ್ ಮನೆಯಲ್ಲಿ ವಾಸ್ತವ್ಯ ಮಾಡಿ ಕೂಲಿ ಕಾರ್ಮಿಕರ ಅಹವಾಲುಗಳನ್ನು ಸ್ವೀಕರಿಸ ಲಾಯಿತು, ಈ ಪ್ರಯುಕ್ತ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ ತೋಟದ ಕಾರ್ಮಿಕರಲ್ಲಿ ಹೆಚ್ಚಿನವರು ೬೦ ವರ್ಷ ಮೇಲ್ಪಟ್ಟವರಾಗಿದ್ದು, ವೃದ್ಧಾಪ್ಯ ವೇತನ ಸೇರಿದಂತೆ ಹಲವು ಸರಕಾರದ ಸೌಲಭ್ಯದಿಂದ ವಂಚಿತರಾಗಿದ್ದು ಇದನ್ನು ಸರಿಪಡಿಸುವುದಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಬಡವರು ಏನೇ ಸಮಸ್ಯೆ ಇದ್ದರೂ ನಮ್ಮ ಗಮನಕ್ಕೆ ತಂದರೆ ಹೆಚ್ಚಿನ ಮುತುವರ್ಜಿ ವಹಿಸಿ ಇದನ್ನು ತಕ್ಷಣ ಸಂಬAಧಿಸಿದ ಇಲಾಖೆ ಮೂಲಕ ಸರಿಪಡಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮಸ್ಥರಿಗೆ ತಿಳಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ರಫೀಕ್ ಖಾನ್, ಆಲಿಕುಟ್ಟಿ, ಹಸೀನಾ, ರೇಶ್ಮಾ, ವನಿತಾ, ಗ್ರಾಮ ಲೆಕ್ಕಾಧಿಕಾರಿ ನಾಗೇಂದ್ರ, ಸೆಸ್ಕಾಂ ಅಧಿಕಾರಿ ಜಯದೀಪ್, ಪಂಚಾಯತಿ ಸಿಬ್ಬಂದಿ ಪುನೀತ್, ಶ್ರೀನಿವಾಸ್,ಇತರರು ಹಾಜರಿದ್ದರು.