ಮಡಿಕೇರಿ, ಮಾ.೧೫: ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಯೋಜನೆಯ ಜಾಗೃತಿ ಅಭಿಯಾನಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿನರಾಳಕರ ಭೀಮರಾವ್ ಲಗಮಪ್ಪ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ ಇತರರು ಚಾಲನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಾಗೃತಿ ವಾಹನಕ್ಕೆ ಚಾಲನೆ ನೀಡಿದ ಅವರು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆ ಅರ್ಹರಿಗೆ ತಲುಪುವಂತಾಗಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದರು.

ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ ೪೨ ಕೋಟಿ ಕಾರ್ಮಿಕರಿಂದ ಉತ್ಪಾದನೆ ಯಾಗುತ್ತಿದೆ. ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧ್ದಪಡಿಸುವವರು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಮತ್ತು ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ, ಚರ್ಮೋದ್ಯಮ, ದ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿಯ ಇತರ ಉದ್ಯೋಗಗಳ ಕೆಲಸಗಾರರು ಅಸಂಘಟಿತ ಕಾರ್ಮಿ ಕರಿಗೆ ಸರ್ಕಾರದ ಸವಲತ್ತು ಗಳು ತಲುಪುವಂತಾಗಬೇಕು ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ಕಾರ್ಮಿಕರಿಗೆ ಅವರ ಜೀವನ ಸಂಧ್ಯಾ ಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲ ಇರುವುದಿಲ್ಲ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ.-ಎಸ್.ವೈ.ಎA) ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ ಎಂದರು.

ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, ೧೮ ರಿಂದ ೪೦ ವರ್ಷದೊಳಗಿರಬೇಕು. ಅವರ ಮಾಸಿಕ ಆದಾಯ ರೂ. ೧,೦೦೦ ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಅವರು ಆದಾಯ ತೆರಿಗೆ, ಇಎಸ್‌ಐ, ಪಿ.ಎಫ್, ಎನ್‌ಪಿಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರ ಬಾರದು ಎಂದರು.

ನೋಂದಣಿ ವಿಧಾನಗಳು: ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ‘ಕಾಮನ್ ಸರ್ವಿಸ್ ಸೆಂಟರ್’ (ಸಿ.ಎಸ್.ಸಿ) ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸ ಬಹುದು. ಸಿ.ಎಸ್.ಸಿ ಗಳ ವಿವರಗಳನ್ನು ಹತ್ತಿರದ ಎಲ್. ಐ.ಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಎ.ಎಸ್.ಐ ಕಾರ್ಪೋ ರೇಷನ್ ಹಾಗೂ ಭವಿಷ್ಯ ನಿಧಿ ಸಂಘಟನೆಯ ಕಚೇರಿಗಳು ಹಾಗೂ ಇಲಾಖೆಯ ವೆಬ್ ವಿಳಾಸಗಳು ಹಾಗೂ ವೆಬ್ ವಿಳಾಸ hಣಣಠಿ://ಟoಛಿಚಿಣoಡಿ.ಛಿsಛಿಛಿಟouಜ.iಟಿ ಗಳಲ್ಲಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಯೋಜನೆಯ ಸೌಲಭ್ಯ: ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಫಲಾನುಭವಿಯ ವಯಸ್ಸು ೬೦ ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ ೩ ಸಾವಿರ ರೂ ಖಚಿತ ಕನಿಷ್ಟ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ.

ಚಂದಾದಾರರು ೧೦ ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದಲ್ಲಿ, ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂತಿರುಗಿಸಲಾಗುತ್ತದೆ. ೧೦ ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದಲ್ಲಿ ಅವರು ಪಾವತಿಸಿದ ವಂತಿಕೆಯೊAದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚೋ ಅದನ್ನು ಪಾವತಿಸಲಾಗುವುದು. ಫಲಾನು ಭವಿಯ ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು, ಅವರು ೬೦ ವರ್ಷದ ಒಳಗಾಗಿ ಮೃತಪಟ್ಟಲ್ಲಿ/ ಶಾಶ್ವತ ಅಂಗ ನ್ಯೂನತೆಯಿಂದ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವನ/ಅವಳ ಸಂಗಾತಿಯುತದ ನಂತರ ಈ ಯೋಜನೆಗೆ ಸೇರಬಹುದಾಗಿದ್ದು, ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿ ಅಥವಾ ಅವರ ವಂತಿಕೆಯನ್ನು ಬಡ್ಡಿಯೊಂದಿಗೆ ಪಡೆಯಲು ಅರ್ಹರು. ಪಿಂಚಣಿ ಆರಂಭಗೊAಡ ನಂತರ ಚಂದಾದಾರರು ಮೃತಪಟ್ಟಲ್ಲಿ, ಅವರ ಪತ್ನಿ/ ಪತಿ ಮಾತ್ರ ಪಿಂಚಣಿಯ ಶೇ. ೫೦ ರಷ್ಟು ಪಿಂಚಣಿಯನ್ನು ಪಡೆಯಲು ಅರ್ಹರು. ಯೋಜನೆಯು ವಿದ್ಯುನ್ಮಾನ ಆಧಾರಿತವಾಗಿದ್ದು ಎಸ್‌ಎಂಎಸ್ ಮೂಲಕ ಎಲ್ಲಾ ವ್ಯವಹಾರಗಳ ಮಾಹಿತಿಯನ್ನು ಫಲಾನುಭವಿಗೆ ಕಾಲ ಕಾಲಕ್ಕೆ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ವಿಳಾಸ, ಟೋಲ್ ಫ್ರೀಕಾಲ್ ಸಂಖ್ಯೆ; ೧೮೦೦-೨೬೭-೬೮೮೮, ಕಾರ್ಮಿಕ ಅಧಿಕಾರಿಗಳ ಕಚೇರಿ, ರೂ ನಂ.೧೧, ೧ನೇ ಮಹಡಿ, ಜಿಲ್ಲಾಡಳಿತ ಭವನ, ಮಡಿಕೇರಿ. ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, ರೂ. ನಂ.೧೧, ೧ ನೇ ಮಹಡಿ, ಜಿಲ್ಲಾಡಳಿತ ಭವನ, ಮಡಿಕೇರಿ. ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, ತಾಲೂಕು ಕಚೇರಿ ಕಟ್ಟಡ, ಸೋಮ ವಾರಪೇಟೆ. ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, ವಿಜಯಾ ಬ್ಯಾಂಕ್ ಬಿಲ್ಡಿಂಗ್, ವೀರಾಜಪೇಟೆ. ಸಮೀಪದ ಸಿ.ಎಸ್.ಸಿ ಸೆಂಟರ್‌ಗಳನ್ನು ಸಂಪರ್ಕಿಸಬಹುದು.