ಮಡಿಕೇರಿ, ಮಾ. ೧೫: ಆರೋಗ್ಯವಂತರಿAದ ಮಾತ್ರ ಸದೃಢ, ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಈ ನಿಟ್ಟಿನಲ್ಲಿ ದುಶ್ಚಟಗಳಿಗೆ ದಾಸರಾಗದೆ ಸಮಾಜದ ಸ್ವಾಸ್ಥö್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಕರೆ ನೀಡಿದರು.

ಕೊಡಗು ಬ್ಲಡ್ ಡೋನರ್ಸ್ ಅಸೋಸಿಯೇಷನ್‌ನ ೨ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ನಗರದ ಬಾಲಭವನದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ದರು.

ಮಾದಕ ದ್ರವ್ಯಕ್ಕೆ ಯುವಕರು ಬಲಿಯಾಗುತ್ತಿರುವುದು ವಿಷಾ ಧÀನೀಯ. ಡ್ರಗ್ಸ್ ಮುಕ್ತ ಕೊಡಗು ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸುವಂತೆ ಮನವಿ ಮಾಡಿದರು.

ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಮಾತನಾಡಿ, ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುವವರಿಗೆ ಸಂಘಟನೆ ತ್ವರಿತವಾಗಿ ರಕ್ತ ತಲುಪಿಸಿ ಸಮಾಜಮುಖಿಯಾಗಿ ತೊಡಗಿಸಿಕೊಂಡಿದೆ. ರಕ್ತಕ್ಕೆ ಯಾವುದೇ ಜಾತಿ, ಧರ್ಮ ಇಲ್ಲ ಅದೇ ರೀತಿ ಸಂಘಟನೆ ಕೂಡ ಧರ್ಮ, ಜಾತಿ ಎನ್ನದೆ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಶಿಬಿರಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜನೆ ಯಾಗಬೇಕು. ರಕ್ತದ ಕೊರತೆ ಎದುರಾಗಬಾರದು ಎಂದರು.

ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಮುಖ್ಯವೈದ್ಯಾಧಿಕಾರಿ ಡಾ. ಕರುಂಬಯ್ಯ ಯುವ ಬರಹಗಾರ ಚಂದನ್ ನಂದರುಬೆಟ್ಟ ಬರೆದ ನೆತ್ತರು ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಈ ಸಂದರ್ಭ ಕರ್ನಾಟಕ ಬ್ಲಡ್ ಹೆಲ್ಪ್ಲೈನ್ ಸಂಘಟನೆಯ ಪ್ರಮುಖ ಇರ್ಫಾನ್, ರಕ್ತ ನೀಡಿ ಜೀವ ಉಳಿಸಿ ಸಂಘಟನೆಯ ಮುಖ್ಯಸ್ಥ ಶ್ರೀದರ್ ಕುಮಟಕರ್ ಸೇರಿದಂತೆ ಹಲವು ಬಾರಿ ರಕ್ತದಾನ ಮಾಡಿದ ಸಂಘಟನೆಯ ೧೦ ಮಂದಿ ಸದಸ್ಯರನ್ನು ಸನ್ಮಾನಿಸ ಲಾಯಿತು. ವಿವಿಧ ಸಂಘಟನೆ ಸದಸ್ಯರು, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ಈ ಸಂದರ್ಭ ಬ್ಲಡ್ ಡೋನರ್ಸ್ ಸಂಸ್ಥೆ ಅಧ್ಯಕ್ಷ ಹೆಚ್.ಆರ್. ವಿನು, ಕಾರ್ಯದರ್ಶಿ ಮೈಕಲ್ ವೇಗಸ್ ಸೇರಿದಂತೆ ಇನ್ನಿತರರು ಇದ್ದರು.