ಮಡಿಕೇರಿ, ಮಾ. ೧೫: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ತಾ. ೧೬ ರಂದು (ಇಂದು) ಬೆಳಗ್ಗೆ ೧೦ ಗಂಟೆಗೆ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಕೊಡವ ಕಿರು ನಾಟಕ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಅಕಾಡೆಮಿ ಪ್ರಕಟಣೆ ಮೂಲಕ ತಿಳಿಸಿದೆ.
ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಕೊಂಗAಡ ಎಸ್. ದೇವಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ, ಬಾಚರಣಿಯಂಡ ರಾಣು ಅಪ್ಪಣ್ಣ, ರಂಗಭೂಮಿ ಕಲಾವಿದ ಮಾದೇಟಿರ ಬೆಳ್ಳಿಯಪ್ಪ, ತೂಕ್ಬೊಳಕ್ ಪತ್ರಿಕೆ ಸಂಪಾದಕ ಮುಲ್ಲೇಂಗಡ ಮಧೋಶ್ ಪೂವಯ್ಯ ಪಾಲ್ಗೊಳ್ಳಲಿದ್ದಾರೆ.