ಸೋಮವಾರಪೇಟೆ,ಮಾ.೧೫: ರೋಟರಿ ಜಿಲ್ಲಾ ರಾಜ್ಯಪಾಲ ಎಂ. ರಂಗನಾಥ ಭಟ್ ಅವರು ತಾ. ೧೬ರಂದು (ಇಂದು) ಸೋಮವಾರಪೇಟೆ ರೋಟರಿ ಕ್ಲಬ್‌ಗೆ ಭೇಟಿ ನೀಡುತ್ತಿದ್ದು, ಈ ಪ್ರಯುಕ್ತ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಎಂ.ಡಿ. ಲಿಖಿತ್ ತಿಳಿಸಿದ್ದಾರೆ.

ಬೆಳಿಗ್ಗೆ ೧೦.೩೦ಕ್ಕೆ ಇಲ್ಲಿನ ವಿವೇಕಾನಂದ ವೃತ್ತದ ಬಳಿ ನೂತನವಾಗಿ ನಿರ್ಮಿಸಿರುವ ಹೈಮಾಸ್ಟ್ ದೀಪ ಉದ್ಘಾಟನೆ, ೧೦.೪೦ಕ್ಕೆ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಗೆ ಸಿ.ಸಿ. ಕ್ಯಾಮೆರಾದ ಮಾನಿಟರ್ ವಿತರಣೆ, ೧೧ ಗಂಟೆಗೆ ಸಾರ್ವಜನಿಕ ಆಸ್ಪತ್ರೆಯ ಬಳಿಯಲ್ಲಿ ನಿರ್ಮಿಸಿರುವ ಪ್ರವೇಶದ್ವಾರ ಉದ್ಘಾಟನೆ ನಡೆಯಲಿದ್ದು, ಸಂಜೆ ೭ ಗಂಟೆಗೆ ಮಾನಸ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಲಿಖಿತ್ ತಿಳಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾ ರಾಜ್ಯಪಾಲ ರಂಗನಾಥ ಭಟ್, ವಲಯ ಸಹಾಯಕ ರಾಜ್ಯಪಾಲ ಪಿ.ಕೆ. ರವಿ, ಜಿ.ಆರ್. ರವಿಶಂಕರ್ ಅವರುಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.