ನಾಪೋಕ್ಲು, ಮಾ. ೧೫: ಚೆಯ್ಯಂಡಾಣೆ ಗ್ರಾಮ ಪಂಚಾಯತ್ನ ನರಿಯಂದಡ ಗ್ರಾಮದ ಬೊವ್ವೇರಿಯಂಡ ಸನ್ನು, ಲವಕುಮಾರ್ ಅವರ ಅಡಿಕೆ ತೋಟಕ್ಕೆ ಕಳೆದ ರಾತ್ರಿ ಕಾಡಾನೆಗಳು ದಾಳಿ ನಡೆಸಿ ಸುಮಾರು ೩೦ಕ್ಕೂ ಅಧಿಕ ಅಡಿಕೆ ಗಿಡಗಳನ್ನು ಕಿತ್ತು ನಾಶ ಪಡಿಸಿ ನಷ್ಟವನ್ನುಂಟುಮಾಡಿದೆ. ಇದಲ್ಲದೆ ಈ ವಿಭಾಗದಲ್ಲಿ ಸುಮಾರು ೧೪ ಆನೆಗಳಿರುವ ಬಗ್ಗೆ ಗ್ರಾಮಸ್ಥರು ಹೇಳುತ್ತಾರೆ.
ಈ ವಿಭಾಗದಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ನಿರಂತರ ಆನೆಗಳ ಹಾವಳಿ ಇದ್ದು, ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಡಾನೆಗಳನ್ನು ಕೂಡಲೇ ಕಾಡಿಗೆ ಓಡಿಸಲು ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಆದ ನಷ್ಟಕ್ಕೆ ಕೂಡಲೇ ಪರಿಹಾರ ಒದಗಿಸಿ ಆನೆಗಳನ್ನು ಕಾಡಿಗೆ ಓಡಿಸಬೇಕೆಂದು ಒತ್ತಾಯಿಸಿದ್ದಾರೆ.