ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಮಾ.೧೫: ಜಿಲ್ಲೆಯ ಗಡಿ ಭಾಗ ಕೇರಳ ರಾಜ್ಯದಿಂದ ಕೋವಿಡ್ -೧೯ ರ ಸುಳ್ಳು ಪ್ರಮಾಣಪತ್ರ ನೀಡಿ ಜಿಲ್ಲೆಯಲ್ಲಿ ಪ್ರವೇಶಿಸುವುದು ಕಂಡುಬAದಲ್ಲಿ ತಕ್ಷಣ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ದೂರು ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೋವಿಡ್-೧೯ ಲಸಿಕಾ ಕಾರ್ಯಪಡೆಯ ೪ ನೇ ಸುತ್ತಿನ ಪೂರ್ವಭಾವಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚೆಕ್ ಪೋಸ್ಟ್ಗಳಲ್ಲಿ ಸೂಕ್ತ ರೀತಿಯಲ್ಲಿ ತಪಾಸಣೆ ನಡೆಸಬೇಕು. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಇರುವವರು ಸಹಕಾರ ನೀಡದಿದ್ದರೆ ಅಂತಹವರ ವಿರುದ್ದ ಡಿಸಾಸ್ಟರ್ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೆಚ್ಚು ಪ್ರಕರಣಗಳು ಕಂಡುಬAದಲ್ಲಿ ತಕ್ಷಣವೇ ಪ್ರಾಥಮಿಕ ಸಂಪರ್ಕದಲ್ಲಿರುವವರ ಮಾಹಿತಿ ಪಡೆಯಬೇಕು ಪ್ರಕರಣಗಳು ಹೆಚ್ಚಾಗಲು ಕಾರಣದ ಬಗ್ಗೆ ಗಮನ ಹರಿಸಬೇಕು. ಪ್ರವಾಸಿ ಸ್ಥಳಗಳಲ್ಲಿ ಹೆಚ್ಚಿನ ಗಮನ ಹರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸರ್ಕಾರದ ಸುತ್ತೋಲೆಯಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ತಪ್ಪಿದಲ್ಲಿ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಪ್ರತಿನಿತ್ಯ ಕೋವಿಡ್-೧೯ ಎಷ್ಟು ಪರೀಕ್ಷೆ ಮಾಡಲಾಗಿದೆ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಹಾಗೂ ಕೋವಿಡ್ ಲಸಿಕೆ ಸಂಬAಧ ಪ್ರತಿನಿತ್ಯ ಗುರಿ ನಿಗದಿಪಡಿಸರುವ ಪ್ರಕಾರ ಎಷ್ಟು ಸಾಧನೆ ಮಾಡಲಾಗಿದೆ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ, ಸಮುದಾಯ ಆರೋಗ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಸ್.ಎಚ್.ಮಹೇಶ್, ಅವರು ಸಭೆಗೆ ಹಲವು ಮಾಹಿತಿ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕÀ ನಿಂಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೋ, ತಹಶೀಲ್ದಾರ್ ಮಹೇಶ್, ತಾಲೂಕು ವೈದ್ಯಾಧಿಕಾರಿಗಳು ಇತರರು ಇದ್ದರು.