ಮಡಿಕೇರಿ, ಮಾ. ೧೫: ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ, ಗ್ರಾಮ ಪಂಚಾಯಿತಿ ಸಂಪಾಜೆ, ಪೆರಾಜೆ, ಚೆಂಬು, ಮದೆನಾಡು, ಪಯಸ್ವಿನಿ ಸಹಕಾರಿ ಸಂಘ ಸಂಪಾಜೆ ಹಾಗೂ ಬಾಲಚಂದ್ರ ಕಳಗಿ ಅಭಿಮಾನಿ ಬಳಗ ಹಾಗೂ ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಸಂಪಾಜೆ ಗ್ರಾಮಕ್ಕೆ ರಾಷ್ಟç ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದ ದಿ. ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಜರಗುವ ಸ್ವಯಂಪ್ರೇರಿತ ರಕ್ತದಾನ ಹಾಗೂ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವು ತಾ. ೧೯ ರಂದು ಸಂಪಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.