ಕೂಡಿಗೆ, ಮಾ. ೧೫: ಕುಶಾಲನಗರ ಹೋಬಳಿ ವ್ಯಾಪ್ತಿಯ ಮುಳ್ಳುಸೋಗೆ ಕೂಡುಮಂಗಳೂರು ಕೂಡಿಗೆ ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನೇಕ ಮನೆಗಳು ಪೈಸಾರಿ ಮತ್ತು ಕಂದಾಯ ಇಲಾಖೆಗೆ ಒಳಪಡುವ ಜಾಗದಲ್ಲಿ ಮನೆಯ ನಿವೇಶನ ಮಾಡಿಕೊಂಡು ಈಗಾಗಲೇ ಮನೆಯನ್ನು ಕಟ್ಟಿಕೊಂಡಿರುವ ಗ್ರಾಮಸ್ಥರಿಗೆ ಹಕ್ಕು ಪತ್ರವನ್ನು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭರವಸೆ ನೀಡಿದರು.

ಶಾಸಕರು ಮುಳ್ಳುಸೋಗೆ ಮತ್ತು ಇತರೆ ಗ್ರಾಮಗಳ ಕಾಮಗಾರಿಯ ಭೂಮಿ ಪೂಜೆಗೆ ಆಗಮಿಸಿದ ಸಂದರ್ಭದಲ್ಲಿ ಆ ವ್ಯಾಪ್ತಿಯ ನೂರಾರು ಗ್ರಾಮಸ್ಥರು ಶಾಸಕರಿಗೆ ಮನವಿಯನ್ನು ಸಲ್ಲಿಸಿ ಹಕ್ಕು ಪತ್ರವನ್ನು ನೀಡುವಂತೆ ಕೋರಿದರು.

ಇದಕ್ಕೆ ಸ್ಪಂದಿಸಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಆಯಾ ವ್ಯಾಪ್ತಿಯ ಮನೆ ನಿರ್ಮಿಸಿಕೊಂಡಿರುವವರು ಅದಕ್ಕೆ ಸಂಬAಧಿಸಿದ ಅರ್ಜಿಗಳನ್ನು ಸಲ್ಲಿಸಬೇಕು ಅದರ ಅಧಾರದ ಮೇಲೆ ಮತ್ತು ತಾಲೂಕು ತಹಶೀಲ್ದಾರ್‌ರ ನಿಯಮನುಸಾರವಾಗಿ ಸ್ಥಳ ಪರಿಶೀಲನೆ ನಡೆಸಿ ಹಕ್ಕು ಪ್ರತಗಳನ್ನು ನೀಡಲಾಗುವುದು ಅಲ್ಲದೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಮೊದಲ ನಿವೇಶನಗಳನ್ನು ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಅಲ್ಲದೆ ಮನೆ ನಿರ್ಮಿಸಿಕೊಂಡಿರುವ ಕೊನೆ ಹಂತದ ಬಾಕಿ ಹಣವನ್ನು ನೀಡುವ ಬಗ್ಗೆ ಸಂಬAಧಿಸಿದ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಆರ್. ಮಂಜುಳ ಶ್ರೀನಿವಾಸ, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಮಾಜಿ ಉಪಾಧ್ಯಕ್ಷ ಗಿರೀಶ್ ಕುಮಾರ್, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಲುವರಾಜ್, ಉಪಾಧ್ಯಕ್ಷೆ ಜಯಮ್ಮ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಉಪಾಧ್ಯಕ್ಷ ಬಾಸ್ಕರ್ ನಾಯಕ, ಕೂಡುಮಂಗಳೂರು ಬೂತ್ ಸಮಿತಿಯ ಅಧ್ಯಕ್ಷರಾದ ಮಂಜುನಾಥ, ಪ್ರವೀಣ್, ಗ್ರಾಮ ಪಂಚಾಯಿತಿ ಸದಸ್ಯರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು. - ಕೆ.ಕೆ ನಾಗರಾಜಶೆಟ್ಟಿ