ಸುಂಟಿಕೊಪ್ಪ, ಮಾ. ೧೬: ಸೋಮವಾರಪೇಟೆ ತಾಲೂಕು ಸುಂಟಿಕೊಪ್ಪ ಅಂಬೇಡ್ಕರ್ ಸಂಘದಿAದ ಡಾ. ಅಂಬೇಡ್ಕರ್ ಜಯಂತಿ ಅಂಗವಾಗಿ ಏಪ್ರಿಲ್ ತಿಂಗಳಲ್ಲಿ ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ಎಂ.ಎಸ್. ರವಿ ಅಧ್ಯಕ್ಷತೆಯಲ್ಲಿ ವಿವಿಧ ಸಂಘ-ಸAಸ್ಥೆಯ ಸಹಯೋಗದಲ್ಲಿ ನಡೆದ ಸಭೆಯಲ್ಲಿ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ನಡೆಸಲು ತೀರ್ಮಾನಿಸಲಾಯಿತು.
ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗ-ಜಗ್ಗಾಟ, ಮಹಿಳೆಯರಿಗೆ ಮ್ಯೂಸಿಕಲ್ ಚೇರ್, ಗೋಣಿಚೀಲ ಓಟ, ಮಹಿಳೆಯರಿಗೆ ಸೂಜಿಗೆ ದಾರ ಪೋಣಿಸುವುದು, ಓಟ, ಕಪ್ಪೆ ಜಿಗಿತ, ಕಣ್ಣಿಗೆ ಬಟ್ಟೆ ಕಟ್ಟಿ ಮಡಿಕೆ ಒಡೆಯುವ ಸ್ಪರ್ಧೆ, ಚಮಚದಲ್ಲಿ ನಿಂಬೆ ಹಣ್ಣು ಇಟ್ಟು ನಡಿಗೆ ಸ್ಪರ್ಧೆ, ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ ಏರ್ಪಡಿಸಲಾಗಿದೆ. ಜಿಲ್ಲಾ ಯುವಜನ ಸೇವಾ ಇಲಾಖೆಯಿಂದ ಮಂಡ್ಯದ ಡೊಳ್ಳು ಕುಣಿತ, ಪೂಜಾ ಕುಣಿತದೊಂದಿಗೆ ಡಾ. ಅಂಬೇಡ್ಕರ್ ಅವರ ಭಾವಚಿತ್ರವನ್ನು ವಾಹನದಲ್ಲಿರಿಸಿ ಮೆರವಣಿಗೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ನಾಗರತ್ನ, ವಸಂತಿ, ಮಹಿಳಾ ಸೂರ್ಯ ಸ್ವ-ಸಹಾಯ ಸಂಘದ ಚೆಲುವಿ, ಭೂಮಿಕಾ ಸಂಘದ ಮುನಿಯಮ್ಮ ಅಂಬೇಡ್ಕರ್ ಸಂಘದ ಉಪಾಧ್ಯಕ್ಷ ನರಸ, ಗೌರವ ಅಧ್ಯಕ್ಷ ಕಾವೇರಪ್ಪ, ಶಶಿ, ಎ. ವೆಂಕಟೇಶ್ ಲಕ್ಷö್ಮಣ, ದೇವರಾಜ್, ಕಂಬಿಬಾಣೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣ ಇತರರು ಉಪಸ್ಥಿತರಿದ್ದರು.