ಕೂಡಿಗೆ, ಮಾ, ೧೬: ನೆಲ್ಲಿಹುದಿಕೇರಿ ಬಳಿ ಕಾವೇರಿ ನದಿಯಿಂದ ಮರಳು ತೆಗೆದು ನಿಗದಿಪಡಿಸಿದ ಜಾಗದಲ್ಲಿ ಮರಳು ಸಂಗ್ರಹ ಮಾಡದೆ ಖಾಸಗಿ ಜಾಗ ಒಂದರಲ್ಲಿ ಮರಳನ್ನು ಸಂಗ್ರಹ ಮಾಡಿರುವ ಬಗ್ಗೆ ಮಾಹಿತಿಯ ಮೇರೆಗೆ ಅಧಿಕಾರಿ ವರ್ಗದವರು ಸ್ಥಳ ಪರಿಶೀಲನೆ ನಡೆಸಿ ದಾಸ್ತಾನು ಇದ್ದ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂದರ್ಭ ಸೋಮವಾರ ಪೇಟೆ ತಾಲೂಕು ತಹಶೀಲ್ದಾರ್ ಮಾಡಿರುವ ಬಗ್ಗೆ ಮಾಹಿತಿಯ ಮೇರೆಗೆ ಅಧಿಕಾರಿ ವರ್ಗದವರು ಸ್ಥಳ ಪರಿಶೀಲನೆ ನಡೆಸಿ ದಾಸ್ತಾನು ಇದ್ದ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂದರ್ಭ ಸೋಮವಾರ ಪೇಟೆ ತಾಲೂಕು ತಹಶೀಲ್ದಾರ್ ಅನಿಲ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಬು, ಉಪಾಧ್ಯಕ್ಷೆ ಮತ್ತು ಗ್ರಾಮ ಲೆಕ್ಕಾಧಿಕಾರಿ ಸಚಿನ್ ಸೇರಿದಂತೆ ಪೊಲೀಸ್ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ತೆರಳಿ ಮರಳನ್ನು ವಶಪಡಿಸಿಕೊಂಡಿದ್ದಾರೆ.
ದಾಸ್ತಾನು ಇದ್ದ ಮರಳನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಅಭಿವೃದ್ಧಿ ಕೆಲಸಗಳಿಗೆ ಉಪಯೋಗಿಸಿ ಕೊಳ್ಳುವುದಕ್ಕೆ ತೀರ್ಮಾನಿಸಲಾಯಿತು. ಮರಳನ್ನು ನೆಲ್ಲಿಹುದಿಕೇರಿ ಗ್ರಾಮ
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹಸ್ತಾಂತರಿಸಲಾಗಿದೆ.