ಇಂದು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ
ಬೆಂಗಳೂರು, ಮಾ. ೧೬: ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಾಗರಿಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟç, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ. ಆದ್ದರಿಂದ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಎಂದು ಸಿಎಂ ಹೇಳಿರುವುದಾಗಿ ಸಚಿವರು ತಿಳಿಸಿದರು. ಇಂದಿನಿAದ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಇದುವರೆಗೂ ೧೫ ಲಕ್ಷ ಜನರಿಗೆ ನೀಡಿದ್ದೇವೆ. ಪ್ರತಿ ದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ ೧೦೦ ಜನರಿಗೆ ಟೆಸ್ಟ್ ಮಾಡಲೇ ಬೇಕು. ಜನರಲ್ ಆಸ್ಪತ್ರೆಗಳಲ್ಲಿ ೫೦೦ ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತವ್ಯಕ್ತಿಗೆ ೨೦ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪರೀಕ್ಷೆ ಮಾಡಲೇ ಬೇಕು ಎಂದು ಸಚಿವರು ಹೇಳಿದರು. ಸಭೆ - ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ಮಾಡಲಾಗುವುದು ಎಂದರು. ಪ್ರತಿಭಟನೆ, ಸಿನಿಮಾ ಹಾಲ್‌ಗಳಿಗೆ ಟಫ್ ರೂಲ್ಸ್ ವಿಚಾರ ಸಂಬAಧ ಪ್ರತಿಕ್ರಿಯಿಸಿ, ತಾ. ೧೭ ರಂದು (ಇಂದು) ಪ್ರಧಾನಿ ಮೋದಿ ಅವರು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸುತ್ತಾರೆ. ಬಹಿರಂಗ ಸಭೆ-ಸಮಾರಂಭಗಳಿಗೆ ಕಠಿಣ ನಿಯಮ ಜಾರಿ ವಿಚಾರ ಕೂಡ ಆ ಬಳಿಕ ನಿರ್ಧಾರ ಆಗುತ್ತದೆ ಎಂದು ಸಚಿವ ಡಾ. ಕೆ. ಸುಧಾಕರ್ ವಿವರಿಸಿದರು.
ಉಪಚುನಾವಣೆ ದಿನಾಂಕ ಪ್ರಕಟ
ಬೆಂಗಳೂರು, ಮಾ. ೧೬: ರಾಜ್ಯದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಬೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ಮೂರು ಕ್ಷೇತ್ರಗಳಿಗೂ ಏಪ್ರಿಲ್ ೧೭ ರಂದೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದ ಹಿನ್ನೆಲೆ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಕ್ಷೇತ್ರದ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ರಾಜೀಜಿನಾಮೆಯಿಂದ ತೆರವಾಗಿದ್ದ ಕ್ಷೇತ್ರ. ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ.