ಪೊನ್ನಂಪೇಟೆ, ಮಾ. ೧೬: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ, ಈ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳ ಸುರೇಶ್ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಪೊನ್ನAಪೇಟೆ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ ಮೂಕಳೇರ ಮಧು ಕುಮಾರ್ ಹಾಗೂ ಕೋಟೆರ ಕಿಶನ್ ಉತ್ತಪ್ಪ ಅವರ ನೇತೃತ್ವದಲ್ಲಿ, ತಾಲೂಕು ಬಿಜೆಪಿ ಅಧ್ಯಕ್ಷ ನೆಲ್ಲಿರ ಚಲನ್ ಹಾಗೂ ಪೊನ್ನಂಪೇಟೆ ಬಿಜೆಪಿ ಮಹಾ ಶಕ್ತಿ ಕೇಂದ್ರದ ಸಂಚಾಲಕ ಆಲೆಮಾಡ ಸುಧೀರ್, ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು.