ಕೂಡಿಗೆ, ಮಾ. ೧೬: ಕ್ರಷರ್ ಮತ್ತು ಕ್ವಾರಿ ಕೆಲಸಕ್ಕೆ ಸರ್ಕಾರ ಹೊರಡಿಸಿರುವ ನೂತನ ನೀತಿಗಳನ್ನು ಸಡಿಲ ಮಾಡಬೇಕೆಂದು ಒತ್ತಾಯಿಸಿ ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.
ಅಭಿವೃದ್ಧಿ ಕಾಮಗಾರಿಗೆ ತೊಂದರೆಗಳು ಆಗಬಾರದೆಂಬ ಹಿನ್ನೆಲೆಯಲ್ಲಿ ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘದಿAದ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಿ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿ.ಎಂ. ವಿಜಯ್ ಸೇರಿದಂತೆ ಸಂಘದ ಸರ್ವ ಸದಸ್ಯರು ಹಾಜರಿದ್ದರು.