ಮಡಿಕೇರಿ, ಮಾ. ೧೬: ರಾಜ್ಯ ಮಾಧ್ಯಮ ಅಕಾಡೆಮಿ, ಕರ್ನಾಟಕ ಕಾರ್ಯನಿರತ ಪತ್ರ ಕರ್ತರ ಸಂಘ ಬಾಗಲಕೋಟೆ ಹಾಗೂ ವಾರ್ತಾ ಮತ್ತು ಸಂಪರ್ಕ ಇಲಾಖೆ ಬಾಗಲಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೨೧ ರಂದು ಬಾಗಲಕೋಟೆ ಜಿ.ಪಂ. ಸಭಾಂಗಣ ದಲ್ಲಿ ವಿಚಾರ ಸಂಕಿರಣ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕೋವಿಡ್ -೧೯ ಜಿಲ್ಲಾ ಮಟ್ಟದ ಪತ್ರಿಕೆಗಳ ಮೇಲೆ ಬೀರಿದ ಪರಿಣಾಮಗಳು ಎಂಬ ಕುರಿತು ವಿಚಾರ ಸಂಕಿರಣ ನಡೆಯಲಿದ್ದು, ಇದರಲ್ಲಿ ಮುಖ್ಯ ಉಪನ್ಯಾಸಕರಾಗಿ ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರು ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ, ಸಚಿವ ಮುರುಗೇಶ್ ನಿರಾಣಿ, ವಿಪಕ್ಷ ನಾಯಕ ಎಸ್. ಆರ್. ಪಾಟೀಲ್, ಶಾಸಕ ಸಿದ್ದು ಸವದಿ ಪಾಲ್ಗೊಳ್ಳಲಿದ್ದಾರೆ. ಶಾಸಕ ಡಾ. ವೀರಣ್ಣ ಸಿ. ಚದಂತಿಮಠ ಅಧ್ಯಕ್ಷತೆ ವಹಿಸಲಿದ್ದಾರೆ.