ಸೋಮವಾರಪೇಟೆ, ಮಾ. ೧೭: ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಸಿಐಟಿಯು ಸಂಘಟನೆಯ ಸಹಯೋಗದೊಂದಿಗೆ ಇಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿ ಕಾರಿಗಳ ಕಚೇರಿ ಮುಂಭಾಗ ಕಪ್ಪು ಪಟ್ಟಿ ಧರಿಸಿ ಧರಣಿ ನಡೆಸಿದರು.

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಮೂಲಸೌಕರ್ಯಗಳನ್ನು ಒದಗಿಸಿಲ್ಲ. ಈ ಹಿಂದಿನಿAದಲೂ ೧೯ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯಾದ್ಯಂತ ಹೋರಾಟ ನಡೆಸು ತ್ತಿದ್ದರೂ ಸರ್ಕಾರ ಗಮನಹರಿಸಿಲ್ಲ. ಎಲ್ಲಾ ಯೋಜನೆಗಳನ್ನು ಕಾರ್ಯಗತ ಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳುವ ಸರ್ಕಾರ, ಅವರುಗಳ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನೆ ಯಲ್ಲಿದ್ದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಆರೋಪಿಸಿದರು.

ಅಂಗನವಾಡಿ ಕಾರ್ಯಕರ್ತೆ ಯರಿಗೆ ಸೇವಾ ಜೇಷ್ಠತೆಯ ಆಧಾರದಲ್ಲಿ ಗೌರವಧನ ಬಿಡುಗಡೆ ಮಾಡಬೇಕು. ನಿವೃತ್ತಿ ಸೌಲಭ್ಯ ಕೊಡಬೇಕು. ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೇಮಿಸಬೇಕು. ಸಹಾಯಕಿಯರ ಗೌರವಧನದ ವ್ಯತ್ಯಾಸದ ಮೊತ್ತವನ್ನು ಬಿಡುಗಡೆ ಮಾಡಬೇಕು. ಹೆಚ್ಚುವರಿ ಕೆಲಸಗಳಿಂದ ಮುಕ್ತಿ ನೀಡಬೇಕೆಂದು ಕಾರ್ಯಕರ್ತೆಯರು ಆಗ್ರಹಿಸಿದರು.

ಅಂಗನವಾಡಿ ಕಾರ್ಯಕರ್ತೆ ಯರನ್ನು ಇತರ ಇಲಾಖೆಯ ಕಾರ್ಯಕ್ರಮಗಳಿಗೆ ಬಳಸಿಕೊಳ್ಳ ಲಾಗುತ್ತಿದೆ. ಭಾಗ್ಯಲಕ್ಷಿö್ಮÃ ಯೋಜನೆ, ಮಾತೃವಂದನೆ, ಪೋಷಣ್ ಅಭಿಯಾನ, ಚುನಾವಣೆ ಸಂದರ್ಭ ಬಿಎಲ್‌ಓ ಕೆಲಸ ಸೇರಿದಂತೆ ಇತರ ಇಲಾಖೆಗಳ ಕೆಲಸವನ್ನು ನಮ್ಮ ಮೇಲೆ ಹಾಕುತ್ತಿದ್ದು, ಇದೀಗ ಸ್ಮಾರ್ಟ್ ಫೋನ್ ಮೂಲಕ ದಾಖಲಾತಿ ನಿರ್ವಹಣೆಯಂತಹ ಅವೈಜ್ಞಾನಿಕ ಕ್ರಮ ಹೇರಿದ್ದಾರೆ. ಇದನ್ನು ತಕ್ಷಣ ವಾಪಸ್ ಪಡೆದು ಹಿಂದಿನAತೆಯೇ ದಾಖಲಾತಿ ನಿರ್ವಹಿಸಲು ಅವಕಾಶ ಕಲ್ಪಿಸ ಬೇಕೆಂದು ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಭಾಗೀರಥಿ ಒತ್ತಾಯಿಸಿದರು. ಇತರ ಇಲಾಖೆಯ ಕೆಲಸ ಕಾರ್ಯಗಳನ್ನು ಇಂದಿನಿAದಲೇ ಸ್ಥಗಿತಗೊಳಿಸಲಾಗುವುದು. ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂಬ ಮನವಿ ಪತ್ರವನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಯ್ಯ ಅವರ ಮೂಲಕ ಇಲಾಖೆಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ ಉಪಾಧ್ಯಕ್ಷೆ ಕೆ.ಹೆಚ್. ಶಾರದ, ಕಾರ್ಯದರ್ಶಿ ವನಜಾಕ್ಷಿ, ಖಜಾಂಚಿ ಜಮುನ, ಪದಾಧಿಕಾರಿ ಚಂದ್ರಿಕ ಸೇರಿದಂತೆ ತಾಲೂಕಿನ ವಿವಿಧ ಅಂಗನವಾಡಿಗಳ ಕಾರ್ಯಕರ್ತೆಯರು ಭಾಗವಹಿಸಿದ್ದರು.