ಮಡಿಕೇರಿ, ಮಾ. ೧೭: ಸಮಾಜದಲ್ಲಿ ಸಹಾಯದ ನಿರೀಕ್ಷೆಯಲ್ಲಿರುವ ವರ್ಗವಿದ್ದಂತೆಯೇ ಸಹಾಯದ ಹಸ್ತ ಚಾಚಲು ಸಿದ್ಧವಾಗಿರುವ ವರ್ಗವೂ ಇರುತ್ತದೆ. ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯದಲ್ಲಿ ನಿರಂತರವಾಗಿ ತೊಡಗುತ್ತಿದ್ದು ವಿದ್ಯಾರ್ಥಿಗಳು ಇದರ ಸಹಾಯವನ್ನು ಪಡೆದುಕೊಂಡು ಪ್ರಗತಿ ಸಾಧಿಸಬೇಕೆಂದು ರೋಟರಿ ಸಂಸ್ಥೆಯ ಅಧ್ಯಕ್ಷ ಪಿ.ಟಿ. ಗಣಪತಿ ಕರೆ ನೀಡಿದರು.

ಮರಗೋಡಿನ ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ರೋಟರಿ ಹಾಗೂ ನಾವಿಕ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್‌ಗಳನ್ನು ವಿತರಣೆ ಮಾಡಿ ಮಾತನಾಡಿದರು. ಕೊಡಗು ರೋಟರಿ ಘಟಕದಿಂದ ಪ್ರತಿ ವರ್ಷ ಸರ್ಕಾರಿ ಶಾಲೆಗಳಲ್ಲಿ ಓದುವ ೪೦ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಮಡಿಕೇರಿಯ ಸರಕಾರಿ ಪ್ರೌಢಶಾಲೆಗೆ ರೂ. ೩೯೦೦೦ ಮೌಲ್ಯದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಪ್ರತಿ ವರ್ಷ ಸಾಧಕ ಶಿಕ್ಷಕರಿಗೆ ಸನ್ಮಾನ ಮಾಡುತ್ತಿದ್ದು, ರೋಟರಿಯಲ್ಲಿ ಅಧಿಕಾರದ ಆಸೆ, ಸ್ವಾರ್ಥಕ್ಕಿಂತ ಸೇವೆ ಮಾಡುವುದು ಮುಖ್ಯವಾಗಿದೆ ಎಂದು ತಿಳಿಸಿದರು. ನಾವಿಕ ಸಂಸ್ಥೆಯ ಪ್ರತಿನಿಧಿ ಬೊಳ್ಳೂರು ಜಯಪ್ರಕಾಶ್ ಮಾತನಾಡಿ, ಅಮೇರಿಕಾದ ವಿವಿಧ ಭಾಗಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಸಾಂಸ್ಕೃತಿಕವಾಗಿ ಸಂಘಟಿಸಲೆAದು ಅಸ್ತಿತ್ವಕ್ಕೆ ಬಂದ ಸಂಸ್ಥೆಯೇ ನಾವಿಕ-ನಾವು ವಿಶ್ವ ಕನ್ನಡಿಗರು. ಶಿಕ್ಷಣ, ಉದ್ಯೋಗ ನಿಮಿತ್ತ ಅಮೇರಿಕಾದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಕನ್ನಡಿಗರು ನೆಲೆಸಿದ್ದು, ಈ ಅನಿವಾಸಿ ಕನ್ನಡಿಗರು ಕನ್ನಡ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯ, ಪರಂಪರೆಯ ವರ್ಷ ಸಾಧಕ ಶಿಕ್ಷಕರಿಗೆ ಸನ್ಮಾನ ಮಾಡುತ್ತಿದ್ದು, ರೋಟರಿಯಲ್ಲಿ ಅಧಿಕಾರದ ಆಸೆ, ಸ್ವಾರ್ಥಕ್ಕಿಂತ ಸೇವೆ ಮಾಡುವುದು ಮುಖ್ಯವಾಗಿದೆ ಎಂದು ತಿಳಿಸಿದರು. ನಾವಿಕ ಸಂಸ್ಥೆಯ ಪ್ರತಿನಿಧಿ ಬೊಳ್ಳೂರು ಜಯಪ್ರಕಾಶ್ ಮಾತನಾಡಿ, ಅಮೇರಿಕಾದ ವಿವಿಧ ಭಾಗಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಸಾಂಸ್ಕೃತಿಕವಾಗಿ ಸಂಘಟಿಸಲೆAದು ಅಸ್ತಿತ್ವಕ್ಕೆ ಬಂದ ಸಂಸ್ಥೆಯೇ ನಾವಿಕ-ನಾವು ವಿಶ್ವ ಕನ್ನಡಿಗರು. ಶಿಕ್ಷಣ, ಉದ್ಯೋಗ ನಿಮಿತ್ತ ಅಮೇರಿಕಾದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಕನ್ನಡಿಗರು ನೆಲೆಸಿದ್ದು, ಈ ಅನಿವಾಸಿ ಕನ್ನಡಿಗರು ಕನ್ನಡ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯ, ಪರಂಪರೆಯ ಹಿಲ್ಸ್ ವತಿಯಿಂದ ಸ್ಥಾಪಿಸಿರುವುದರ ಬಗ್ಗೆ ಮಾಹಿತಿ ನೀಡಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಪಿ.ಎಸ್. ರವಿಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ರೋಟರಿ ಜಿಲ್ಲಾ ಕಾರ್ಯದರ್ಶಿ ಗೀತಾ ಗಿರೀಶ್, ದನು ಗಣಪತಿ, ಭಾರತಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಕೋಚನ ಲವಿನ್, ನಿರ್ದೇಶಕರಾದ ಬಿ.ಎಸ್. ಪ್ರಭು ಶೇಖರ್, ಮಾಳಿಗೆಮನೆ ದೇವಯ್ಯ, ಬಡುವಂಡ್ರ ಕವಿತ, ಬಳಪದ ಜಯಕುಮಾರ್, ಪ್ರಾಂಶುಪಾಲ ಸುರೇಶ್ ನಾಯ್ಕ್ ಉಪಸ್ಥಿತರಿದ್ದರು. ಶಿಕ್ಷಕಿ ಬಿ.ಬಿ. ಪೂರ್ಣಿಮ ಸ್ವಾಗತಿಸಿ, ಎಂ.ಪಿ. ವೀಣಾ ವಂದಿಸಿದರು.